
ತುಮಕೂರು: ಸಾರಿಗೆ ಮತ್ತು ಪೊಲೀಸ್ ಸಿಬ್ಬಂದಿಯ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಸಾರಿಗೆ ಸಿಬ್ಬಂದಿಯನ್ನು ನಗರದ ಕೋಟೆ ಆಂಜನೇಯ ದೇವಸ್ಥಾನದ ಬಳಿ ಬಂಧಿಸಿರುವ ಘಟನೆ ನಡೆದಿದೆ.
ದೇವಸ್ಥಾನದ ವೃತ್ತದಲ್ಲಿ ಸಾರಿಗೆ ಸಿಬ್ಬಂದಿ, ಸಾರ್ವಜನಿಕರ ನಡುವೆ ಗಲಾಟೆ ನಡೆಯುತ್ತಿದ್ದನ್ನು ಕಂಡು ಬುದ್ದಿವಾದ ಹೇಳಲು ಬಂದ ಟ್ರಾಫಿಕ್ ಪೇದೆಗೆ, ಕುಡಿದ ಮತ್ತಿನಲ್ಲಿದ್ದ ತುಮಕೂರು ಕೆಎಸ್‌ಆರ್‌ಟಿಸಿ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಮಣಿಕಂಠ, ಪುಟ್ಟರಾಜು ಎಂಬುವವವರು ಅವಾಚ್ಯವಾಗಿ ನಿಂದಿಸಿ ಹಲ್ಲೆಗೆ ಎನ್ನಲಾಗಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ತುಮಕೂರು ನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Comments are closed.