ರಾಷ್ಟ್ರೀಯ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಆಸ್ಪತ್ರೆಗೆ ದಾಖಲು

Pinterest LinkedIn Tumblr


ಚೆನ್ನೈ: ಅತ್ತ ತ್ರಿಪುರಾದಲ್ಲಿ ನಡೆದ ಚುನಾವಣೆಯಲ್ಲಿ ಸಿಪಿಎಂ ಸೋಲನುಭವಿಸಿದ್ದರೆ, ಇತ್ತ ಅನಾರೋಗ್ಯದ ಸಂಬಂಧ ಕೇರಳದ ಸಿಪಿಎಂ ಧುರೀಣ, ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೂತ್ರ ಸಂಬಂಧಿತ ಕಾಯಿಲೆಯಿಂದಾಗಿ ಪಿಣರಾಯಿ ವಿಜಯನ್ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ತಪಾಣೆಗೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಿಣರಾಯಿ ಆಸ್ಪತ್ರೆಗೆ ದಾಖಲಾಗಿರುವ ವಿಚಾರ ಈವರೆಗೂ ಸಾರ್ವಜನಿಕವಾಗಿ ಬಹಿರಂಗ ಪಡಿಸಿಲ್ಲ. ಆದರೆ ಮಾಹಿತಿಗಳ ಪ್ರಕಾರ ಪಿಣರಾಯಿ ಶುಕ್ರವಾರ ರಾತ್ರಿ 11.55ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಿಣರಾಯಿಯವರು ದೈನಂದಿನ ಆರೋಗ್ಯ ತಪಾಸಣೆಗಾಗಿ ಬಂದಿದ್ದಾರೆ, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅಪೊಲೋ ಆಸ್ಪತ್ರೆ ಮೂಲಗಳು ತಿಳಿಸಿವೆ.

ಆಹಾರಧಾನ್ಯ ಕದ್ದ ಆರೋಪದಲ್ಲಿ ಕಳೆದ ತಿಂಗಳು ಗುಂಪೊಂದು ನಡೆಸಿದ ಹಲ್ಲೆಯಿಂದ ಮೃತಪಟ್ಟ ಮಧು ಎಂಬವರ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿದ್ದ ಪಿಣರಾಯಿ ವಿಜಯನ್‌, ಕುಟುಂಬಕ್ಕೆ ಸಾಂತ್ವನ ಹೇಳಿ ತಪ್ಪಿತಸ್ಥರ ವಿರುದ್ಧ ಸೂಕ್ರ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದರು.

Comments are closed.