
ಬೆಂಗಳೂರು: ಕೇಂದ್ರದಲ್ಲಿ ಟಿಡಿಪಿ ಜೊತೆಗಿನ ಬಿಕ್ಕಟ್ಟು, ಮುಂಬರುವ ರಾಜ್ಯವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.ವಿಶೇಷವಾಗಿ ಗಡಿ ಭಾಗದಲ್ಲಿ ಹೆಚ್ಚು ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದೆ.
ಆಂಧ್ರ ಪ್ರದೇಶದ ಗಡಿ ಭಾಗದಲ್ಲಿ ವಾಸಿಸುತ್ತಿರುವ ಜನರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕುವುದಿಲ್ಲ ಎಂದು ಟಿಡಿಪಿ ಮುಖಂಡರು ಹೇಳಿದ್ದಾರೆ.ಹಲವು ವಿಧಾನಸಭೆ ಚುನಾವಣೆಯಲ್ಲಿ ತೆಲುಗು ಸಮುದಾಯ ಪ್ರಮುಖ ಪಾತ್ರ ವಹಿಸುತ್ತದೆ, ವಿಶೇಷವಾಗಿ ಗಡಿ ಭಾಗದ ಜಿಲ್ಲೆಗಳಾದ ರಾಯಚೂರು, ಬಳ್ಳಾರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿರುವ ಜನರು ಪ್ರಮುಖ ಪಾತ್ರ ವಹಿಸುತ್ತಾರೆ.
ಮುಂದಿನ ಕೆಲಸ ವಾರಗಳಲ್ಲಿ ಟಿಡಿಪಿ ಮುಖಂಡರು ಆ ಸ್ಥಳಗಳಿಗೆ ತೆರಳಿ ಬಿಜೆಪಿಗೆ ಮತ ಹಾಕದಂತೆ ಮನವಿ ಮಾಡಲಿದ್ದಾರೆ, ಇದನ್ನು ಕಾಂಗ್ರೆಸ್ ಟಾರ್ಗೆಟ್ ಮಾಡಿಕೊಂಡು ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಲಿದ್ದಾರೆ. ಸದ್ಯ ಇದು ಕರ್ನಾಟಕದಲ್ಲಿ ಬಿಜೆಪಿ ಸಮಸ್ಯೆಯಾಗಿದೆ. ಮುಂದಿನ ದಿನಗಳಲ್ಲಿ ದೊಡ್ಡ ವಿವಾದವಾಗುವ ಸಾದ್ಯತೆಯಿದೆ.
ಕರ್ನಾಟಕದಲ್ಲಿರುವ ಆಂಧ್ರಪ್ರದೇಶ ಜನತೆ ಬಿಜೆಪಿಗೆ ಮತ ಹಾಕದಂತೆ ಪ್ರಚಾರ ಮಾಡಲಿದ್ದಾರೆ, ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡದಂತೆ ಪಟ್ಟು ಹಿಡಿದಿರುವ ಬಿಜೆಪಿ ವಿರುದ್ದ ಪ್ರಚಾರ ಕಾರ್ಯ ಆರಂಭವಾಗಲಿದೆ ಎಂದು ಸಿದ್ದರಾಮಯ್ಯ ಸರ್ಕಾರದ ಹಿರಿಯ ಸಚಿವರೊಬ್ಬರು ಹೇಳಿದ್ದಾರೆ.ಇನ್ನೂ ಬೆಂಗಳೂರಿನಲ್ಲಿರುವ ಆಂದ್ರ ಪ್ರದೇಶ ಜನತೆ ತಮ್ಮ ಮುಂದಿನ ನಡೆಯ ಬಗ್ಗೆ ನಿರ್ಧರಿಸಲಿದ್ದಾರೆ.
Comments are closed.