
ಮಂಗಳೂರು, ಮಾರ್ಚ್.11: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರ ಕೊಲೆ ಯತ್ನ ಕೃತ್ಯವನ್ನು ಖಂಡಿಸಿ ದ.ಕ.ಜಿಲ್ಲಾ ಬಿಜೆಪಿ ಸಮಿತಿಯು ಶನಿವಾರ ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

ಪ್ರತಿಭಟನ ಸಭೆಯನ್ನುದ್ದೇಶಿಸಿ ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ ಮಾತನಾಡಿ, ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಲೋಕಾಯುಕ್ತ ನ್ಯಾಯಮೂರ್ತಿಗೇ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ. ಆಡಳಿತದ ಎಲ್ಲಾ ಹಂತದಲ್ಲೂ ವಿಫಲವಾಗಿರುವ ಈ ಸರಕಾರವನ್ನು ಕಿತ್ತೊಗೆಯಬೇಕಾಗಿದೆ ಎಂದು ಹೇಳಿದರು.

ಪಕ್ಷದ ಮುಖಂಡರಾದ ವೇದವ್ಯಾಸ ಕಾಮತ್, ಸುಲೋಚನಾ ಭಟ್, ಕಸ್ತೂರಿ ಪಂಜ, ಸುದರ್ಶನ ಮೂಡುಬಿದಿರೆ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Comments are closed.