ರಾಷ್ಟ್ರೀಯ

ಇರಾಕ್’ನಲ್ಲಿ ಹತ್ಯೆಗೀಡಾದ 39 ಭಾರತೀಯರ ಸಂತ್ರಸ್ತ ಕುಟುಂಬಸ್ಥರಿಗೆ ರೂ.10 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

Pinterest LinkedIn Tumblr

ನವದೆಹಲಿ: ಇರಾಕ್ ನಲ್ಲಿ ಇಸಿಸ್ ಉಗ್ರರಿಂದ ಹತ್ಯೆಗೀಡಾದ 39 ಭಾರತೀಯರ ಸಂತ್ರಸ್ತ ಕುಟುಂಬಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ತಲಾ ರೂ.10 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

ಏ.1 ರಂದು ಇರಾಕ್ ದೇಶಕ್ಕೆ ಭೇಟಿ ನೀಡಿದ್ದ ವಿದೇಶಾಂಗ ಖಾತೆಗಳ ರಾಜ್ಯ ಸಚಿವ ವಿ.ಕೆ. ಸಿಂಗ್ ಅವರು 38 ಭಾರತೀಯ ಮೃತದೇಹಗಳನ್ನು ಮರಳಿ ಭಾರತಕ್ಕೆ ಕರೆ ತಂದಿದ್ದರು.

38 ಮಂದಿಯ ಪೈಕಿ 27 ಮಂದಿ ಪಂಜಾಬ್ ಮೂಲದರವಾಗಿದ್ದು, 27 ಮಂದಿಯ ಮೃತದೇಹಳನ್ನು ಅವರವರ ಕುಟುಂಬ ಸದಸ್ಯರಿಗೆ ವಿ.ಕೆ. ಸಿಂಗ್ ಅವರು ಹಸ್ತಾಂತರ ಮಾಡಿದ್ದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದ ಪಂಜಾಬ್ ಸಚಿವರೊಬ್ಬರೂ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ.5 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದರು. ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿಯರು ರೂ.10 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆಂದು ತಿಳಿದುಬಂದಿದೆ.

Comments are closed.