
ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್ಶಿಪ್ನಲ್ಲಿ ಮಂಗಳವಾರ ಇಲ್ಲಿನ ಸವಾಯ್ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ದ ರಾಜಸ್ಥಾನ ರಾಯಲ್ಸ್ 15 ರನ್ ಅಂತರದ ಸಮಾಧಾನಕರ ಗೆಲುವು ದಾಖಲಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ರಾಜಸ್ಥಾನ್ ರಾಯಲ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ಗಳ ನಷ್ಟಕ್ಕೆ 158 ರನ್ ಗಳಿಸಿತು. ಪಂಜಾಬ್ ಬೌಲರ್ ಗಳನ್ನು ಎಡಬಿಡದೆ ಕಾಡಿದ ಜೋಸ್ ಬಟ್ಲರ್ 58 ಎಸೆತಗಳಲ್ಲಿ 82 ರನ್ ಗಳಿಸಿ ತಂಡ 158 ರನ್ ಗಳಿಸಲು ನೆರವಾದರು.
ನಂತರ ಬ್ಯಾಟಿಂಗ್ ಆರಂಭಿಸಿದ ಪಂಜಾಬ್ ತಂಡದ ಪರ ಕೆಎಲ್ ರಾಹುಲ್ (70 ಎಸೆತಗಳಲ್ಲಿ 95 ರನ್, ಔಟಾಗದೇ) ಏಕಾಂಗಿ ಹೋರಾಟ ನಡೆಸಿದರು. ಆದರೆ ಉಳಿದ ಬ್ಯಾಟ್ಸ್ ಮನ್ ಗಳು ಪೆವಿಲಿಯನ್ ಪರೇಡ್ ನಡೆಸಿದ ಪರಿಣಾಮ ರಾಹುಲ್ ಅವರ ಏಕಾಂಗಿ ಹೋರಾಟ ಫಲಿಸದೇ ಪಂಜಾಬ್ ತಂಡ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 143 ರನ್ ಗಳಿಸಲಷ್ಟೆ ಸಾಧ್ಯವಾಯಿತು.
ಈ ಗೆಲುವಿನೊಂದಿಗೆ ಆಡಿರುವ 10 ಪಂದ್ಯಗಳಲ್ಲಿ ನಾಲ್ಕು ಗೆಲುವುಗಳನ್ನು ದಾಖಲಿಸಿರುವ ರಾಜಸ್ಥಾನ ಒಟ್ಟು ಎಂಟು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಅತ್ತ ಅಷ್ಟೇ ಪಂದ್ಯಗಳಲ್ಲಿ 12 ಅಂಕಗಳನ್ನು ಸಂಪಾದಿಸಿರುವ ಪಂಜಾಬ್ ಮೂರನೇ ಸ್ಥಾನದಲ್ಲೇ ಮುಂದುವರಿದಿದೆ.
ಸ್ಫರ್ಧಾತ್ಮಕ ಗುರಿ ಬೆನ್ನತ್ತಿದ ಕಿಂಗ್ಸ್ ಆರಂಭ ಉತ್ತಮವಾಗಿರಲಿಲ್ಲ. ಕಳೆದ ಪಂದ್ಯದ ಹೀರೊ ಕೆಎಲ್ ರಾಹುಲ್ ಹೊರತುಪಡಿಸಿದರೆ ಇತರೆ ಅಗ್ರ ಕ್ರಮಾಂಕದ ಬ್ಯಾಟ್ಸ್ಮನ್ಗಳು ಎರಡಂಕಿಯನ್ನು ತಲುಪಲು ಯಶಸ್ವಿಯಾಗಲಿಲ್ಲ.
Comments are closed.