ಕರ್ನಾಟಕ

ನಾನು ರಾಜ್ಯದ ಜನತೆಯ ಮುಲಾಜಿನಲ್ಲಿ ಇಲ್ಲ, ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆ: ಕುಮಾರಸ್ವಾಮಿ

Pinterest LinkedIn Tumblr


ಬೆಂಗಳೂರು: ನಾನು ಆರೂವರೆ ಕೋಟಿ ಜನರ ಮುಲಾಜಿನಲ್ಲಿಲ್ಲ. ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಸಾಲ ಮನ್ನಾ ಮಾಡದಿದ್ದರೆ ರಾಜೀನಾಮೆ ಕೊಡುತ್ತೇನೆ. ರಾಜೀನಾಮೆ ಕೊಡಿ ಎಂದು ಒತ್ತಡ ಹೇರುವ ಅಗತ್ಯವಿಲ್ಲ. ಇನ್ನೂ ಸಚಿವ ಸಂಪುಟ ವಿಸ್ತರಣೆ ಆಗಿಲ್ಲ, ಒಂದು ವಾರ ಕಾಲಾವಕಾಶ ಕೊಡಿ. ಯಾವುದೇ ರೈತರು ಆತ್ಮಹತ್ಯೆ ಮಾಡಿಕೊಳ್ಳಬೇಡಿ. ರೈತ ಸಂಘಟನೆಗಳು ನನಗೆ ಒತ್ತಡ ತರುವುದು ಬೇಡ. ಚುನಾವಣೆ ಸಂದರ್ಭದಲ್ಲಿ ರೈತ ಸಂಘಟನೆಯವರು ಯಾರು ಏನೇನು ಮಾಡಿದ್ದಾರೆ ಎಂಬುದು ಗೊತ್ತು. ನಾನು ಕುರ್ಚಿಗೆ ಅಂಟಿಕೊಂಡು ಕೂರುವವನಲ್ಲ ಎಂದರು.

ಕಾಂಗ್ರೆಸ್‌ನವರು ಹಣಕಾಸು ಖಾತೆ ಕೇಳುತ್ತಿದ್ದಾರೆ. ಸಂಪುಟ ರಚನೆ ಸಂದರ್ಭದಲ್ಲಿ ಪ್ರಮುಖ ಖಾತೆಗಳನ್ನು ಕೇಳುವುದು ಸಹಜ. ಕೇಳಿದ್ದರಲ್ಲಿ ತಪ್ಪಿಲ್ಲ. ಪ್ರಮುಖ ಖಾತೆಗಳ ಹಂಚಿಕೆಯಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ. ಇದರಲ್ಲಿ ಯಾವುದೇ ರೀತಿಯ ಫೈಟ್ ಇಲ್ಲ. ಚರ್ಚೆ ಮಾಡಿ ತೀರ್ಮಾನ ಆಗಬೇಕಿದೆ ಎಂದು ಅವರು ಹೇಳಿದರು.

Comments are closed.