ಕರ್ನಾಟಕ

ಯಶಸ್ವಿನಿ ಆರೋಗ್ಯ ಯೋಜನೆ ರದ್ದು ಪ್ರಶ್ನಿಸಿ ರಿಟ್ ಅರ್ಜಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ತುರ್ತು ನೋಟಿಸ್‌ ಜಾರಿ

Pinterest LinkedIn Tumblr


ಬೆಂಗಳೂರು: ಯಶಸ್ವಿನಿ ಆರೋಗ್ಯ ಯೋಜನೆ ರದ್ದು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ರಿಟ್‌ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ತುರ್ತು ನೋಟಿಸ್‌ ಜಾರಿಗೊಳಿಸಿದೆ.

ಈ ಕುರಿತು ನಂಜನಗೂಡು ತಾಲೂಕಿನ ಟಿ.ಎಸ್‌ ವಿದ್ಯಾಸಾಗರ್‌, ಹಾಸನ ಜಿಲ್ಲೆ ಮಹದೇವಿ ಜತ್ತಿ ಎಂಬುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮಂಗಳವಾರ ನಡೆಸಿದ ನ್ಯಾ.ಅರವಿಂದ ಕುಮಾರ್‌ ಅವರಿದ್ದ ಏಕಸದಸ್ಯ ಪೀಠ, ಪ್ರತಿವಾದಿಗಳಾದ ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆ, ಯಶಸ್ವಿನಿ ಕೋ ಆಪರೇಟಿವ್‌ ಹೆಲ್ತ್‌ಕೇರ್‌ ಟ್ರಸ್ಟ್‌, ಸಹಕಾರ ಇಲಾಖೆಗೆ ತುರ್ತು ನೋಟಿಸ್‌ ಜಾರಿಗೊಳಿಸಿತು. ಅಲ್ಲದೆ, ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆಯೂ ತಾಕೀತು ಮಾಡಿದ ನ್ಯಾಯಪೀಠ ಜೂನ್‌ 6ಕ್ಕೆ ವಿಚಾರಣೆ ಮುಂದೂಡಿತು.

ರಾಜ್ಯಸರ್ಕಾರ ಯಶಸ್ವಿನಿ, ವಾಜಪೇಯಿ ಆರೋಗ್ಯ ಶ್ರೀ ಸೇರಿ ಆಯ್ದ ಸಬ್ಸಿಡಿ ದರದ ಆರೋಗ್ಯ ಯೋಜನೆಗಳನ್ನು ಒಟ್ಟುಗೂಡಿಸಿ ಆರೋಗ್ಯ ಕರ್ನಾಟಕ ಯೋಜನೆ ಎಂದು ಜಾರಿಗೊಳಿಸಿದೆ. ಹೀಗಾಗಿ ಯಶಸ್ವಿನಿ ಯೋಜನೆ ಪ್ರಯೋಜನ ಮೇ 31ಕ್ಕೆ ಕೊನೆಗೊಳ್ಳಲಿದೆ. ಆದರೆ, ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಫ‌ಲಾನು ಭವಿಗಳೇ ಹೆಚ್ಚಿನ ಚಿಕಿತ್ಸಾ ಮೊತ್ತ ಭರಿಸಬೇಕಾಗುತ್ತದೆ ಹಾಗೂ ಕೆಲ ನಿಯಮಗಳು ಅಸಮರ್ಪಕವಾಗಿವೆ. ಹೀಗಾಗಿ ಯಶಸ್ವಿ ಯೋಜನೆ ರದ್ದುಗೊಳಿಸಿದ ಸರ್ಕಾರದ ಆದೇಶವನ್ನೇ ದ್ದುಗೊಳಿಸುವಂತೆ ಅರ್ಜಿದಾರರು ಕೋರಿದ್ದಾರೆ.

ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ
ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಅವಧಿಯ ಕೊನೇ ಹಂತದಲ್ಲಿ ಜಾರಿಗೆ ತರಲಾಗಿದ್ದ “ಯೂನಿವರ್ಸಲ್‌ ಹೆಲ್ತ್‌ ಸ್ಕೀಮ್‌’ನ ಸಾಧಕ-ಬಾಧಕಗಳ ಬಗ್ಗೆ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಮಂಗಳವಾರ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ, ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಅಜಯ್‌ ಸೇಠ್, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್‌. ಮಂಜುನಾಥ್‌ ಸೇರಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಯಶಸ್ವಿನಿ ಆರೋಗ್ಯ ಯೋಜನೆ ಇರುವಾಗಲೇ “ಯೂನಿವರ್ಸಲ್‌ ಹೆಲ್ತ್‌ ಸ್ಕೀಮ್‌’ ಜಾರಿಗೆ ಬಂದಿದೆ. ಈ ಯೋಜನೆ ಅನುಷ್ಠಾನಕ್ಕೆ ತರಬೇಕಾದರೆ ಯಶಸ್ವಿನಿ ಯೋಜನೆ ಬಗ್ಗೆ ಕೆಲವೊಂದು ಗೊಂದಲಗಳು ಎದುರಾಗುತ್ತವೆ. ಇದಕ್ಕೆ ಪರಿಹಾರ ಕಂಡುಕೊಳ್ಳುವುದು ಹೇಗೆ ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ಯಶಸ್ವಿನಿ ಯೋಜನೆ ಮುಂದುವರಿಸಿಕೊಂಡು ಹೋಗಬೇಕೆಂಬ ಅಭಿಪ್ರಾಯ ಸಭೆಯಲ್ಲಿ ಬಂದಿದೆ. ಹೀಗಾಗಿ, ಇದರ ಬಗ್ಗೆ ಸಮಗ್ರ ವರದಿ ಸಿದಟಛಿಪಡಿಸಿ ಸಚಿವ ಸಂಪುಟದ ಮುಂದೆ ಮಂಡಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ. ಬುಧವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.

Comments are closed.