ಕರ್ನಾಟಕ

ಕನ್ನಡ ಟಿವಿ ನಿರೂಪಕ ಚಂದನ್ ಸಾವಿನಿಂದ ಮನನೊಂದ ಪತ್ನಿ, ತನ್ನ ಮಗನನ್ನು ಕೊಂದು ಆತ್ಮಹತ್ಯೆಗೆ ಯತ್ನ

Pinterest LinkedIn Tumblr

ಬೆಂಗಳೂರು: ಇತ್ತೀಚೆಗೆ ಅಪಘಾತದಲ್ಲಿ ಮೃತಪಟ್ಟ ನಿರೂಪಕ ಚಂದನ್ ಅವರ ಪತ್ನಿ ಮೀನಾ, ತಮ್ಮ ಮಗ ತುಷಾರನನ್ನು ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಕನ್ನಡ ಟಿವಿ ನಿರೂಪಕ ಚಂದನ್ ಸಾವಿನ ಹಿನ್ನೆಲೆಯಲ್ಲಿ ಅವರ ಪತ್ನಿ ಮೀನಾ (38) ಮನನೊಂದು ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಮ್ಮ ಪುತ್ರ ತುಷಾರ್‌ನನ್ನು ಕೊಂದು, ತಾವೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಡೊಡ್ದಬಳ್ಳಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಗ ತುಷಾರ್ (13) ಕತ್ತು ಕುಯ್ದು ಹತ್ಯೆ ಮಾಡಿರುವ ಮೀನಾ ಬಳಿಕ ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್‌ಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.

ದೊಡ್ಡಬಳ್ಳಾಪುರದ ಸೋಮೇಶ್ವರ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಇತ್ತೀಚೆಗೆ ಚಂದನ್ (34) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿ ಹೊಡೆದ ಪರಿಣಾಮ ಚಂದನ್ ಹಾಗೂ ಗಾಯಕಿ ಸಂತೋಷಿ (24) ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಗ್ರಾಮದಲ್ಲಿ ನಡೆದಿತ್ತು.

ಗಂಡನ ಸಾವಿನಿಂದ ಮನನೊಂದು ಮಗುವಿನ ಕತ್ತುಕೊಯ್ದು ಕೊಲೆ ಮಾಡಿದ ವೀಣಾ ಅವರೂ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ದೊಡ್ಡಬಳ್ಳಾಪುರ ನಗರದ ಸೊಮೇಶ್ವರ ಬಡಾವಣೆಯ ಮನೆಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ದೊಡ್ಡಬಳ್ಖಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ
ಇದೇ ವೇಳೆ, ದುಃಖದಲ್ಲಿದ್ದರೂ ಮಗುವಿನ ಕಣ್ಣುಗಳನ್ನು ದಾನ ಮಾಡಲು ಅವರ ಕುಟುಂಬ ಮುಂದಾಗಿದೆ. ಬಾಲಕ ತುಷಾರ್‌ನ ಎರಡು ಕಣ್ಣುಗಳ ದಾನಕ್ಕೆ ನಿರ್ಧರಿಸಲಾಗಿದ್ದು, ಅಭಿಷೇಕ ನೇತ್ರಾಲಯ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದಾರೆ.

Comments are closed.