
ನವದೆಹಲಿ: ಭಾರತದ ಆರ್ಥಿಕತೆಯಲ್ಲಿ ಸರಕು ಮತ್ತು ಸೇವಾ ತೆರಿಗೆ – ಜಿಎಸ್ ಟಿ ಸಕಾರಾತ್ಮಕ ಬದಲಾವಣೆ ತಂದಿದೆ ಎಂದು ಪ್ರಧಾನಿ ನರೇಂದ್ರಮೋದಿ ಪುನರ್ ಉಚ್ಚರಿಸಿದ್ದಾರೆ.
ದೆಹಲಿಯ ಇಂಡಿಯ ಗೇಟ್ ಬಳಿ ಸ್ಥಾಪಿಸಲಾಗುತ್ತಿರುವ ವಾಣಿಜ್ಯ ಇಲಾಖೆಯ ನೂತನ ಕಚೇರಿ ಸಂಕೀರ್ಣ ಕಟ್ಟಡ ವಾಣಿಜ್ಯ ಭವನಕ್ಕೆ ಇಂದು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಮುಂದಿನ ವರ್ಷದ ಡಿಸೆಂಬರ್ ಗೂ ಮುಂಚಿತವಾಗಿ ಈ ಕಟ್ಟಡ ಪೂರ್ಣಗೊಳ್ಳಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ಪ್ರಸ್ತುತ ತಂತ್ರಜ್ಞಾನದ ಮೂಲಕ ಸುಲಭ ರೀತಿಯಲ್ಲಿ ವ್ಯವಹರಿಸಬಹುದಾಗಿದೆ. ಮುಂದಿನ ದಿನಗಳಲ್ಲೂ ಇದು ಮತ್ತಷ್ಟು ಅಭಿವೃದ್ದಿಯಾಗಲಿದ್ದು, ಜಿಎಸ್ ಟಿ ಆರ್ಥಿಕತೆಯಲ್ಲಿ ಸಕಾರಾತ್ಮಕ ಪರಿಣಾ ತಂದಿದೆ. ಹಣಕಾಸು ಚಟುವಟಿಕೆಗಳು ಕ್ಷಿಪ್ರವಾಗಿ ದೊರೆಯುವಂತಾಗಿವೆ ಎಂದರು.
ಸುಮಾರು 226 ಕೋಟಿ ರೂಪಾಯಿಗಳ ವೆಚ್ಚದಲ್ಲಿ 4.33 ಎಕರೆ ವಿಸ್ತೀರ್ಣದಲ್ಲಿ ಕಟ್ಟಡ ನಿರ್ಮಾಣವಾಗುತ್ತಿದ್ದು, ಒಂದು ಸಾವಿರ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯನಿರ್ವಹಿಸಲು ವ್ಯವಸ್ಥೆ ಮಾಡಲಾಗುತ್ತಿದೆ.
ಕಟ್ಟಡದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಚಾಲಿತ ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, ಕಾಗದ ರಹಿತ ನೆಟ್ ವರ್ಕಿಂಗ್ ವ್ಯವಸ್ಥೆ ಇರಲಿದೆ. ಈ ಹೊಸ ಕಟ್ಟಡ ಭಾರತದ ಆರ್ಥಿಕತೆಯ ಬೆಳವಣೆಗೆ ಮಾತ್ರವಲ್ಲದೇ, ಆಡಳಿತದಲ್ಲಿ ತಂತ್ರಜ್ಞಾನ ಅಳವಡಿಕೆಯನ್ನು ಪ್ರತಿಬಿಂಬಿಸಲಿದೆ ಎನ್ನಲಾಗಿದೆ.
Comments are closed.