ಕರಾವಳಿ

ಮಧ್ಯಪ್ರದೇಶ ಅತ್ಯಾಚಾರ ಪ್ರಕರಣ : ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮುಸ್ಲಿಂ ಒಕ್ಕೂಟದಿಂದ ಪ್ರತಿಭಟನೆ

Pinterest LinkedIn Tumblr

ಮಂಗಳೂರು, ಜುಲೈ.5: ಮಧ್ಯಪ್ರದೇಶದಲ್ಲಿ 7 ವರ್ಷದ ಬಾಲಕಿಯ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ದ.ಕ. ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಗುರುವಾರ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.

ಪ್ರತಿಭಟನಕಾರರನ್ನುದ್ದೇಶಿಸಿ ದ.ಕ. ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ, ಮಾಜಿ ಮೇಯರ್ ಕೆ.ಅಶ್ರಫ್ ಅವರು ಮಾತನಾಡಿ, ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು, ನಾಗರಿಕ ಸಮುದಾಯವನ್ನು ತಲೆತಗ್ಗಿಸುವಂತೆ ಮಾಡಿದ ಈ ಕೃತ್ಯದಿಂದ ನೊಂದ ಸಂತ್ರಸ್ತೆಗೆ ನ್ಯಾಯ ದೊರೆಕಿಸಬೇಕು ಎಂದು ಆಗ್ರಹಿಸಿದರು.

ಬಾಯಿಗೆ ಕಪ್ಪುಪಟ್ಟಿ ಕಟ್ಟಿ ಮೌನ ಪ್ರತಿಭಟನೆ ನಡೆಸಿದ ಒಕ್ಕೂಟದ ಸದಸ್ಯರು ನ್ಯಾಯಕ್ಕಾಗಿ ಆಗ್ರಹಿಸಿದರು .ಬಳಿಕ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಹಾಗೂ ಸಂತ್ರಸ್ತೆಗೆ ನ್ಯಾಯ ದೊರೆಕಿಸಿಕೊಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಯ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಗಡಿನಾಡು ರಕ್ಷಣಾ ವೇದಿಕೆಯ ಅಧ್ಯಕ್ಷ ಸಿದ್ದೀಕ್ ತಲಪಾಡಿ, ನ್ಯಾಯವಾದಿ ಹನೀಫ್ ಯು., ಬ್ಯಾರಿ ಅಕಾಡಮಿಯ ಸದಸ್ಯ ಹುಸೈನ್ ಕಾಟಿಪಳ್ಳ, ಹಮೀದ್ ಕುದ್ರೋಳಿ, ಮೊಯ್ದಿನ್ ಮೋನು, ಸಾಲಿ ಬಜ್ಪೆ, ಶಬ್ಬೀರ್ ತಲಪಾಡಿ, ತಬೂಕ್ ದಾರಿಮಿ ಕಿನ್ಯ, ಹಿದಾಯತ್ ಮಾರಿಪಳ್ಳ, ಶಾಹುಲ್ ಕೆಂಪಿ, ಸಿರಾಜ್ ಬಜ್ಪೆ, ರಫೀಕ್ ಪಾನೇಲ, ಅದ್ದು ಕೃಷ್ಣಾಪುರ ಮತ್ತಿತರರು ಪಾಲ್ಗೊಂಡಿದ್ದರು.

ನಿರ್ಭಯಾ ಪ್ರಕರಣದ ಮಾದರಿಯಲ್ಲೆ ಬಾಲಕಿಯ ಅತ್ಯಾಚಾರ :

ಮಧ್ಯಪ್ರದೆಶದ ಮಂಡ್ಸಾರ್ ನಲ್ಲಿ 7 ವರ್ಷದ ಬಾಲಕಿಯ ಮೇಲೆ ಇರ್ಫಾನ್ ಖಾನ್ (20) ಆಸೀಫ್ (24) ಎಂಬವರು ಭೀಕರವಾಗಿ ಅತ್ಯಾಚಾರ ನಡೆಸಿದ್ದರು.

ಶಾಲೆ ಮುಗಿಸಿಕೊಂಡು ವಾಪಸ್ಸಾಗಬೇಕಿದ್ದ ಬಾಲಕಿಯನ್ನು ಮನೆಗೆ ಕರೆದೊಯ್ಯಲು ಪೋಷಕರು ಬರುವ ವೇಳೆಗೆ ತಡವಾಗಿತ್ತು. ಇದೇ ಪರಿಸ್ಥಿತಿಯ ಲಾಭ ಪಡೆದಿದ್ದ ಇರ್ಫಾನ್ ಖಾನ್ (20) ಆಸೀಫ್ (24) ಬಾಲಕಿಗೆ ಸಿಹಿ ತಿನಿಸುಗಳ ಆಮಿಷವೊಡ್ಡಿ ಕರೆದೊಯ್ದು ಭೀಕರವಾಗಿ ಅತ್ಯಾಚಾರವೆಸಗಿ, ಗುದದ್ವಾರದ ಚರ್ಮವನ್ನು ಛಿದ್ರಗೊಳಿಸಿ ಜನನಾಂಗದಲ್ಲಿ ವಸ್ತುಗಳನ್ನು ತುರುಕಿದ್ದರು. ಅತ್ಯಾಚಾರಕ್ಕೊಳಗಾದ ಬಾಲಕಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ನಿರ್ಭಯಾ ಪ್ರಕರಣದ ಮಾದರಿಯಲ್ಲೆ 7 ವರ್ಷದ ಬಾಲಕಿಯ ಮರ್ಮಾಂಗವನ್ನು ಘಾಸಿಗೊಳಿಸಿದ್ದ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಜಾರಿಯಾಗಬೇಕೆಂದು ಆಗ್ರಹಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ.

Comments are closed.