
ಮಂಗಳೂರು : ‘ವಿಶ್ವಕರ್ಮ ಬಂಧುಗಳು’ ಭವಂತಿಸ್ಟ್ರೀಟ್ ಇದರ ವತಿಯಿಂದ ಇತ್ತೀಚೆಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಜರಗಿತು.
ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕದೇವಸ್ಥಾನದ ಆಡಳಿತ ಮೊಕ್ತೇಸರ್ ಕೆ. ಕೇಶವ ಆಚಾರ್ಯ ಹಾಗೂ ಬಂದರು ಪೊಲೀಸ್ ಠಾಣೆಯ ಉಪ ನಿರೀಕ್ಷಕ ಸುಂದರ ಆಚಾರ್ಯರು ಅತಿಥಿಗಳಾಗಿ ಪಾಲ್ಗೊಂಡು ವಿದ್ಯಾರ್ಥಿವೇತನ ವಿತರಿಸಿದರಲ್ಲದೆ ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು.
ಸಂಘಟನೆಯ ಅಧ್ಯಕ್ಷ ಹೇಮಂತ್ ಆಚಾರ್ಯ ಎಕ್ಕೂರು ಸಹಿತ ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಒಟ್ಟು 28 ಮಂದಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ನೀಡಲಾಯಿತು.
Comments are closed.