ಅಂತರಾಷ್ಟ್ರೀಯ

ಆತ್ಮಾಹುತಿ ಬಾಂಬ್‌ ದಾಳಿಗೆ ನಾಲ್ವರು ಭದ್ರತಾ ಪಡೆ ಸಿಬ್ಬಂದಿ ಬಲಿ

Pinterest LinkedIn Tumblr


ಕಾಬುಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬುಲ್‌ನಲ್ಲಿ ನಡೆದ ಆತ್ಮಾಹುತಿ ಬಾಂಬ್‌ ದಾಳಿಗೆ ನಾಲ್ವರು ಭದ್ರತಾ ಪಡೆ ಸಿಬ್ಬಂದಿ ಮೃತಪಟ್ಟಿದ್ದಾರೆ.

ಗುರುವಾರ ಮುಂಜಾನೆ ಸ್ಥಳೀಯ ಕಾಲಮಾನ 5 ಗಂಟೆ ಸುಮಾರಿಗೆ ಆತ್ಮಾಹುತಿ ಬಾಂಬ್‌ ದಾಳಿಗಾರ ರಾಷ್ಟ್ರೀಯ ಭದ್ರತಾ ನಿರ್ದೇಶನಾಲಯ ಪಡೆಯನ್ನು ಗುರಿಯಾಗಿಸಿಕೊಂಡು ಸ್ಫೋಟಗೊಳಿಸಿಕೊಂಡಿದ್ದಾನೆ ಎಂದು ಕಾಬುಲ್‌ ಪೊಲೀಸ್‌ ವಕ್ತಾರ ತಿಳಿಸಿದ್ದಾರೆ.

ಈ ಕುರಿತು ತನಿಖೆ ಮುಂದುವರಿದಿದ್ದು, ದಾಳಿಗೆ ನಿಖರ ಕಾರಣ ತಿಳಿದುಬಂದಿಲ್ಲ. ದಾಳಿಯ ಹೊಣೆಯನ್ನು ತಾಲಿಬಾನ್‌ ಉಗ್ರ ಸಂಘಟನೆ ಹೊತ್ತುಕೊಂಡಿದೆ.

ಇನ್ನು ಕಳೆದ ಭಾನುವಾರವಷ್ಟೇ ಕಾಬುಲ್‌ನ ಹಮೀದ್‌ ಕಾರ್‌ಜೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಆತ್ಮಹತ್ಯಾ ದಾಳಿಯಲ್ಲಿ 16 ಜನ ಸಾವಿಗೀಡಾಗಿ, ಸುಮಾರು 60ಕ್ಕೂ ಅಧಿಕ ಜನ ಗಾಯಗೊಂಡಿದ್ದರು.

Comments are closed.