
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರ ನಿವಾಸಕ್ಕೆ ಅನುಮಾನಾಸ್ಪದವಾಗಿ ಕಾರು ನುಗ್ಗಿಸಲು ಯತ್ನಿಸಿದ ಅಪರಿಚಿತ ವ್ಯಕ್ತಿಯನ್ನು ಭದ್ರತಾ ಪಡೆಗಳು ಗುಂಡು ಹಾರಿಸಿ ಕೊಂದು ಹಾಕಿವೆ.
ಕಾಶ್ಮೀರದ ಜಮ್ಮುವಿನಲ್ಲಿ ಈ ಘಟನೆ ನಡೆದಿದ್ದು, ವೇಗವಾಗಿ ಫಾರೂಕ್ ಅಬ್ದುಲ್ಲಾ ಅವರ ಮನೆಗೆ ಕಾರು ನುಗ್ಗಿಸಲು ವ್ಯಕ್ತಿ ಯತ್ನಿಸಿದ್ದು, ಈ ವೇಳೆ ಭದ್ರತಾ ಪಡೆಗಳ ಎಚ್ಚರಿಕೆಯನ್ನೂ ನಿರ್ಲಕ್ಷಿಸಿ ಕಾರನ್ನು ಮನೆಯ ಕಾಂಪೌಂಡ್ ನೊಳಗೆ ನುಗ್ಗಿಸಲು ಯತ್ನಿಸಿದ್ದಾನೆ. ಈ ವೇಳೆ ಬೇರೆ ಮಾರ್ಗವಿಲ್ಲದೆ ಆತನನ್ನು ತಡೆಯಲು ಭದ್ರತಾ ಸಿಬ್ಬಂದಿಗಳು ಗುಂಡು ಹಾರಿಸಿದ್ದಾರೆ. ಈ ವೇಳೆ ಆತ ಮೃತಪ್ಟಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಶಂಕಿತ ವ್ಯಕ್ತಿಯನ್ನು ತಡೆಯಲು ಯತ್ನಿಸಿದ ಭದ್ರತಾ ಸಿಬ್ಬಂದಿಗಳಿಗೂ ಗಾಯಗಳಾಗಿವೆ ಎಂದು ಸೇನಾ ಮೂಲಗಳು ತಿಳಿಸಿವೆ. ಇನ್ನು ಘಟನೆ ಕುರಿತಂತೆ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಭಯೋತ್ಪಾದಕ ಕೃತ್ಯದ ಕುರಿತು ಶಂಕೆಯನ್ನು ಅಲ್ಲಗಳೆದಿದ್ದಾರೆ.
ಇನ್ನು ಘಟನೆಗೆ ಸಂಬಂಧಿಸಿದ ಟ್ವೀಟ್ ಮಾಡಿ ಆತಂಕ ವ್ಯಕ್ತಪಡಿಸಿರುವ ಫಾರೂಕ್ ಅಬ್ದುಲ್ಲಾ ಅವರ ಪುತ್ರ ಮತ್ತು ಕಾಶ್ಮೀರ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಅವರು ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಿದ್ದೇನೆ. ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲ್ಲಿದ್ದಾರೆ ಎಂದು ಹೇಳಿದ್ದಾರೆ.
Comments are closed.