
ಮಂಗಳೂರು : ನಗರ ಪ್ರದೇಶದಲ್ಲಿ ಸರಕಾರಿ ಜಮೀನಿನಲ್ಲಿ ಮನೆ ಕಟ್ಟಿ ವಾಸ್ತವ್ಯವಿರುವ ಕುಟುಂಬದವರಿಗೆ 94 ಸಿಸಿಯಡಿಯಲ್ಲಿ ಹಕ್ಕುಪತ್ರಕ್ಕೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 9 ರವರೆಗೆ ಕಾಲಾವಕಾಶವಿದ್ದು ಮಿನಿ ವಿಧಾನಸೌಧ, ತಾಲೂಕು ಕಚೇರಿಯಲ್ಲಿ ಅಥವಾ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರ ಕಚೇರಿ ಅಟಲ್ ಸೇವಾ ಕೇಂದ್ರದಲ್ಲಿ ಅರ್ಜಿಯನ್ನು ಪಡೆದು ಸಲ್ಲಿಸಬಹುದು.
ಅರ್ಜಿಯೊಂದಿಗೆ ಆಧಾರ್ ಕಾರ್ಡ್ ಪ್ರತಿ, ಪಡಿತರ ಚೀಟಿ, ಮತದಾರರ ಗುರುತು ಚೀಟಿ, ಪಾಸ್ ಪೋರ್ಟ್ ಸೈಜಿನ ಭಾವಚಿತ್ರ ಮತ್ತು ಮನೆಯ ಮಾಲೀಕ ಮನೆಯ ಎದುರು ನಿಂತ ಭಾವಚಿತ್ರ ಲಗತ್ತಿಸಿರಬೇಕು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ತಿಳಿಸಿದ್ದಾರೆ.
ಶಾಸಕರಿಂದ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ :

ಮಂಗಳೂರು : ಸರ್ವಾಗ್ನಿ ಕ್ರಿಕೆಟರ್ಸ್ ಇದರ ಕ್ರಿಕೆಟ್ ಪಂದ್ಯಾಟ ಉದ್ಘಾಟಿಸಿದ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ದೀಪ ಬೆಳಗಿಸಿ ಶಾಂತಿಯ ಸಂಕೇತವಾದ ಪಾರಿವಾಳ ಹಾರಿಸುವ ಮೂಲಕ ಪಂದ್ಯಾಟಕ್ಕೆ ಶುಭ ಹಾರೈಸಿದರು.
ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ :

ಮಂಗಳೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಶೋಕ ನಗರ ಇದರ ಹಳೆ ವಿದ್ಯಾರ್ಥಿ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಭಾಗವಹಿಸಿದರು.
Comments are closed.