ಮಂಗಳೂರು : ಮಂಗಳೂರು ನಗರದಲ್ಲಿ ಶುಕ್ರವಾರ ಮಧ್ಯಾಹ್ನ ಸುರಿದ ಭಾರಿ ಮಳೆಗೆ ಕೊಟ್ಟಾರಚೌಕಿಯಲ್ಲಿ ಕೃತಕ ನೆರೆ ಉಂಟಾಗಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಮಂಗಳೂರು ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಅಗತ್ಯಕ್ರಮಗಳನ್ನು ಸೂಚಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕರು ಕೃತಕನೆರೆ ಬಂದಿರುವ ಈ ಪ್ರದೇಶ ರಾಷ್ಟ್ರೀಯ ಹೆದ್ದಾರಿ ಮತ್ತು ಮಂಗಳೂರು ಮಹಾನಗರ ಪಾಲಿಕೆಗೆ ಒಳಪಟ್ಟ ಪ್ರದೇಶವಾಗಿದೆ. ರಸ್ತೆಯ ಒಂದು ಭಾಗಕ್ಕೆ ಬಿದ್ದ ನೀರು ಇಳಿದುಹೋಗಲು ಸೂಕ್ತ ವ್ಯವಸ್ಥೆ ಆಗಬೇಕಿದೆ. ನೀರು ರಸ್ತೆಯಿಂದ ರಾಜಕಾಲುವೆಗೆ ಸೇರುವ ದಾರಿಯಲ್ಲಿ ಮಣ್ಣು ಅಥವಾ ಇತರ ವಸ್ತುಗಳಿಂದ ಚರಂಡಿ ಬ್ಲಾಕ್ ಆಗಿರಬಹುದು. ಅದನ್ನು ತಕ್ಷಣ ಸರಿಪಡಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
ವಾರ್ಡ್ ಅಧ್ಯಕ್ಷ ಉಮೇಶ್ ಶೆಟ್ಟಿ ಮತ್ತು ಅನೇಕ ಬಿಜೆಪಿ ಕಾರ್ಯಕರ್ತರು ವಾಹನಗಳ ಸುಗಮ ಸಂಚಾರಕ್ಕೆ ಪೊಲೀಸ್ ಅಧಿಕಾರಿ ಗಳೊಂದಿಗೆ ಸಹಕರಿಸಿದರು.
Comments are closed.