ಕರಾವಳಿ

ಕೆಟ್ಟದೃಷ್ಟಿ ನಿವಾರಿಸಿಕೊಳ್ಳಲು ದೇವರ ಮೊರೆ ಹೋಗುತ್ತಿದ್ದೇನೆ : ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ

Pinterest LinkedIn Tumblr

ಧರ್ಮಸ್ಥಳ, ಆಗಸ್ಟ್ 14: ನನ್ನ ಮೇಲೆ ಬಿದ್ದಿರುವ ಕೆಟ್ಟದೃಷ್ಟಿ ನಿವಾರಿಸಿಕೊಳ್ಳಲು ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸುತ್ತಿರುವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಕುಮಾರಸ್ವಾಮಿ, ಸೋಮವಾರ ಧರ್ಮಸ್ಥಳದಲ್ಲಿ ಪತ್ನಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರ ಜತೆ ಮಾತನಾಡಿದರು.

‘ಕೆಲವರ ಕೆಟ್ಟ ದೃಷ್ಟಿ ನನ್ನ ಮೇಲೆ ಬಿದ್ದಿದೆ. ಅದನ್ನು ಸರಿಪಡಿಸಿಕೊಳ್ಳಲು ದೇವರ ಮೊರೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ.ಆಷಾಢ ಕಳೆಯುತ್ತಿದ್ದಂತೆಯೇ ಮುಖ್ಯಮಂತ್ರಿ ಕುಮಾರಸ್ವಾಮಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಲು ಆರಂಭಿಸಿದ್ದಾರೆ.

ಹಾಸನದ ಮೂಲಕ ಶಿರಾಡಿ ಮಾರ್ಗವಾಗಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ ಕುಮಾರಸ್ವಾಮಿ ದೇವಾಲಯಕ್ಕೆ ತೆರಳಿ ಮಂಜುನಾಥನ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ದೇವೇಗೌಡರ ಪತ್ನಿ ಚೆನ್ನಮ್ಮ, ಅನಿತಾ ಕುಮಾರಸ್ವಾಮಿ ಅವರು ಮಂಜುನಾಥನ ಸನ್ನಿಧಿಯಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು.

Comments are closed.