ಕರ್ನಾಟಕ

ಮಳೆಯ ಆರ್ಭಟಕ್ಕೆ ಕಲಬುರಗಿಯಲ್ಲಿ ಮೂವರು; ತೀರ್ಥಹಳ್ಳಿಯಲ್ಲಿ ಬಾಲಕ ಬಲಿ

Pinterest LinkedIn Tumblr

ಕಲಬುರಗಿ / ತೀರ್ಥಹಳ್ಳಿ: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಕುಂಭದ್ರೋಣ ಮಳೆ ಸುರಿಯುತ್ತಿದ್ದು ಕಲಬುರಗಿಯಲ್ಲಿ ಬುಧವಾರ ರಾತ್ರಿ ಪಕ್ಕದ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಮನೆಯಲ್ಲಿ ಮಲಗಿದ್ದ ತಾಯಿ ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿಯಲ್ಲಿ ಗೋಡೆ ಕುಸಿದು ಬಾಲಕ ಸಾವನ್ನಪ್ಪಿದ್ದಾನೆ.

ಕಲಬುರಗಿಯ ಆಳಂದದ ಹಿತ್ತಲಶಿರೂರು ಗ್ರಾಮದಲ್ಲಿ ಪಕ್ಕದ ಮನೆಯ ಗೋಡೆ ಕುಸಿದು ಪ್ರಭು ಎನ್ನುವವರ ಮನೆಯ ಮೇಲೆ ಬಿದ್ದು ಮನೆಯೊಳಗೆ ಮಲಗಿದ್ದ ತಾಯಿ ಲಕ್ಷ್ಮೀ ಬಾಯಿ (30) ಮಕ್ಕಳಾದ ಯಲ್ಲಮ್ಮ (11),ಅಂಬಿಕಾ (10) ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮನೆಯಲ್ಲಿದ್ದ ಪ್ರಭು ಅವರು ಗಾಯಗೊಂಡಿದ್ದು , ಗಂಭೀರ ಸ್ವರೂಪದಲ್ಲಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿಂಬರ್ಗಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತೀರ್ಥಹಳ್ಳಿಯಲ್ಲಿ ಬಾಲಕ ಬಲಿ
ಕೋಣಂದೂರಿನ ಗೋಡೆ ಕುಸಿದು ಬಿದ್ದು ಅಯೂಬ್‌ಎನ್ನುವ ಬಾಲಕ ದಾರುಣವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.

Comments are closed.