
ನವದೆಹಲಿ: ಮುಂದಿನ ತಿಂಗಳು ದೆಹಲಿಯಲ್ಲಿ ನಡೆಯುವ ಆರ್ ಎಸ್ಎಸ್ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ಎಸ್) ತನ್ನನ್ನು ತೀಕ್ಷ್ಣವಾಗಿಯೇ ಟೀಕಿಸುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಆಹ್ವಾನ ನೀಡಲು ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಸೆಪ್ಟೆಂಬರ್ 17ರಿಂದ 19ರವೆಗೆ ದೆಹಲಿಯಲ್ಲಿ ಆರ್ ಎಸ್ ಎಸ್ ಕಾರ್ಯಕ್ರಮ ನಿಗದಿಯಾಗಿದ್ದು, ಇದಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಎಡರಂಗದ ಸೀತಾರಾಮ್ ಯೆಚೂರಿ ಸೇರಿದಂತೆ ಪ್ರತಿಪಕ್ಷಗಳ ಹಲವು ಮುಖಂಡರಿಗೆ ಆಹ್ವಾನ ನೀಡುವ ಸಾಧ್ಯತೆ ಇದೆ.
ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದು, ‘ಭಾರತದ ಭವಿಷ್ಯ’ ಎಂಬ ವಿಷಯದ ಕುರಿತು ಈ ಕಾರ್ಯಕ್ರಮದಲ್ಲಿ ಚರ್ಚೆ ನಡೆಯಲಿದೆ.
ಕಳೆದ ಜೂನ್ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾಗ ಕಾಂಗ್ರೆಸ್ ತೀವ್ರ ಅಸಮಾಧಾನಗೊಂಡಿತ್ತು.
ಈ ಮಧ್ಯೆ, ಆರ್ ಎಸ್ಎಸ್ ಅನ್ನು ಇಸ್ಲಾಮಿಸ್ಟ್ ಗ್ರೂಪ್ ಗೆ ಹೋಲಿಸಿದ ರಾಹುಲ್ ಗಾಂಧಿ ವಿರುದ್ಧ ಆರ್ ಎಸ್ಎಸ್ ಪ್ರಚಾರ ಪ್ರಮುಖ ಅರುಣ್ ಕುಮಾರ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಾಹುಲ್ ಗಾಂಧಿಗೆ ದೇಶ ಮತ್ತು ಆರ್ ಎಸ್ ಎಸ್ ಬಗ್ಗೆ ಗೊತ್ತಿಲ್ಲ ಎಂದಿದ್ದಾರೆ.
ಇಂದು ಇಡೀ ವಿಶ್ವವೇ ಇಸ್ಲಾಮಿಕ್ ಮೂಲಭೂತವಾದದ ಬೆದರಿಕೆಯನ್ನು ಎದುರಿಸುತ್ತಿದೆ. ಅದರ ಬಗ್ಗೆ ಅವರಿಗೆ ಅರಿವಿಲ್ಲ. ಪರಿಸ್ಥಿತಿಯ ಗುರುತ್ವಾಕರ್ಷಣೆಯನ್ನು ಅವರು ಅರ್ಥಮಾಡಿಕೊಳ್ಳುವುದಿಲ್ಲ, ಅದಕ್ಕಾಗಿ ಅವರು ಇಂತಹ ಹೇಳಿಕೆಗಳನ್ನು ನೀತ್ತಿದ್ದಾರೆ ಅರುಣ್ ಕುಮಾರ್ ಅವರು ಹೇಳಿದ್ದಾರೆ.
ಇತ್ತೀಚಿಗಷ್ಟೇ ರಾಹುಲ್ ಗಾಂಧಿ ಅವರು, ಆರ್ ಎಸ್ ಎಸ್ ಅರಬ್ ರಾಷ್ಟ್ರಗಳಲ್ಲಿರುವ ಮುಸ್ಲಿಂ ಬ್ರದರ್ ಹುಡ್ ಸಂಘಟನೆಯ ಕಲ್ಪನೆಯನ್ನು ಹೋಲುತ್ತದೆ. ಅದು ಭಾರತದ ಸ್ವರೂಪವನ್ನೇ ಬದಲಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದರು.
Comments are closed.