
ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಸುಭದ್ರವಾಗಿದೆ. ಈ ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಆಪತ್ತು ಎದುರಾಗುವುದಿಲ್ಲ ಎಂದರು.
ಜೆಡಿಎಸ್, ಕಾಂಗ್ರೆಸ್ ಮೈತ್ರಿ ಸರ್ಕಾರ ಐದು ವರ್ಷ ಪೂರೈಸುವುದಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ , ಕೆಲವರು ಮೈತ್ರಿ ಸರ್ಕಾರದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಸ್ಪಷ್ಟಪಡಿಸಿದರು.
ಸರ್ಕಾರ ನೂರು ದಿನಗಳನ್ನು ಪೂರೈಸುತ್ತಿದ್ದು, ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಐದು ವರ್ಷಗಳನ್ನು ಪೂರೈಸಲಿದೆ ಎಂದು ಈ ಸಂದರ್ಭದಲ್ಲಿ ವಿಶ್ವಾಸವ್ಯಕ್ತಪಡಿಸಿದರು.
Comments are closed.