
(File Photos)
ಮಂಗಳೂರು ಸೆಪ್ಟೆಂಬರ್.11 : ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ; ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣಪನ ಮೂರ್ತಿಗಳನ್ನು ಬಳಸದಿರಿ; ಅಲಂಕಾರಕ್ಕೂ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಿ; ಬಾವಿ, ಕೆರೆ, ನದಿಗಳಲ್ಲಿ ಗಣಪತಿ ವಿಸರ್ಜನೆ ಮಾಡಬೇಡಿ ಇದರಿಂದ ನಮ್ಮ ಪರಿಸರ ಮಾಲಿನ್ಯ ಹೆಚ್ಚಲಿದೆ ಎಂದು ಹಿರಿಯ ಪರಿಸರ ಅಧಿಕಾರಿ ರಾಜಶೇಖರ್ ಪುರಾಣಿಕ್ ವಿನಂತಿಸಿದ್ದಾರೆ.

ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸುವುದು, ಕಸವನ್ನು ಎಲ್ಲೆಂದರಲ್ಲಿ ಬಿಸಾಡುವುದರಿಂದ ಸಮಾಜದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಹಾಗಾಗಿ ಹೂವಿನ ಹಾರ, ತಟ್ಟೆ, ಲೋಟ, ಎಲೆಗಳನ್ನು ಎಲ್ಲೆಂದರಲ್ಲಿ ಬಿಸಾಡದೆ ಕಸ ವಿಲೇ ವಾಹನಕ್ಕೆ ನೀಡಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ
Comments are closed.