
ಚೆನ್ನೈ: ತೈಲ ಬೆಲೆ ಏರಿಕೆಯಿಂದಾಗಿ ಜನರು ತೊಂದರೆ ಅನುಭವಿಸುತ್ತಿದ್ದರೆ ತಮಿಳುನಾಡಿನ ಪೆಟ್ರೋಲ್ ಪಂಪ್ ಒಂದರಲ್ಲಿ ಗ್ರಾಹಕರಿಗೆ ಉಚಿತವಾಗಿ 1 ಲೀ. ಪೆಟ್ರೋಲ್ ಅಥವಾ ಡೀಸೆಲ್ ನೀಡಲಾಗುತ್ತಿದೆ.
ಕೃಷ್ಣಗಿರಿಯ ರಾಯಕೊಟ್ಟೈ ರಸ್ತೆಯಲ್ಲಿನ ಎಚ್‌ಪಿ ಪೆಟ್ರೋಲ್ ಪಂಪ್‌ನಲ್ಲಿ ಈ ವಿಶೇಷ ಕೊಡುಗೆ ನೀಡಲಾಗುತ್ತಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯಲು ಪೆಟ್ರೋಲ್ ಪಂಪ್‌ನವರ ಆ್ಯಪ್ ಅನ್ನು ಗೂಗಲ್ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬೇಕಿದೆ. ಜತೆಗೆ ಹಿಂದೂಸ್ತಾನ್ ಪೆಟ್ರೋಲಿಯಂ ಲಿ. ಕೂಡ ಜನರು ನಗದುರಹಿತ ವಹಿವಾಟು ನಡೆಸುವಂತೆ ಪ್ರೇರೇಪಿಸಲು ಆ್ಯಪ್‌ಗೆ ಬೆಂಬಲ ನೀಡಿದೆ.
ಆ್ಯಪ್ ಮೂಲಕ ಬಳಕೆದಾರರು ಖರೀದಿಸುವ ಪ್ರತಿ 5 ಲೀ. ಪೆಟ್ರೋಲ್ ಅಥವಾ ಡೀಸೆಲ್ ಜತೆಗೆ 1 ಲೀ. ಪೆಟ್ರೋಲ್ ಅಥವಾ ಡೀಸೆಲ್ ಉಚಿತವಾಗಿ ನೀಡಲಾಗುತ್ತದೆ. ಈ ಕೊಡುಗೆ ಎರಡು ತಿಂಗಳವರೆಗೆ ಚಾಲ್ತಿಯಲ್ಲಿರಲಿದೆ. ತೈಲ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನತೆಗೆ ಉಚಿತ ಇಂಧನ ಕೊಡುಗೆ ಖುಷಿ ಕೊಟ್ಟಿದ್ದು, ನೂರಾರು ಸಂಖ್ಯೆಯಲ್ಲಿ ಜನರು ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಉಚಿತ ಕೊಡುಗೆಯ ಪ್ರಯೋಜನ ಪಡೆಯುತ್ತಿದ್ದಾರೆ.
Comments are closed.