
ಬೆಂಗಳೂರು: ತೆರಿಗೆ ವಂಚನೆ ಆರೋಪ ಪ್ರಕರಣ ಸಂಬಂಧ ವಿಚಾರಣೆಗಾಗಿ ಆರ್ಥಿಕ ಅಪರಾದಗಳ ನ್ಯಾಯಾಲಯಕ್ಕೆ ಸಚಿವ ಡಿ.ಕೆ ಶಿವಕುಮಾರ್ ಶನಿವಾರ ಹಾಜರಾಗಿದ್ದಾರೆ.
ಡಿ. ಕೆ. ಶಿವಕುಮಾರ್ ಮನೆ ಮೇಲೆ ದಾಳಿ ನಡೆಸಿದ್ದ ಐಟಿ ಇಲಾಖೆ ಹಂತ ಹಂತವಾಗಿ ನಾಲ್ಕು ಕೇಸ್ ದಾಖಲಿಸಿತ್ತು.
ಈ ಪೈಕಿ 3 ಪ್ರಕರಣಗಳಲ್ಲಿ ಡಿಕೆಶಿ ಸಹಿತ ಉಳಿದ ಆರೋಪಿಗಳು ಜಾಮೀನು ಪಡೆದುಕೊಂಡಿದ್ದಾರೆ.
ನಾಲ್ಕನೇ ಪ್ರಕರಣದಲ್ಲಿ ನ್ಯಾಯಾಲಯವೂ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಶನಿವಾರ ಜಾಮೀನು ಅರ್ಜಿ ವಿಚಾರಣೆ ಹಿನ್ನೆಲೆಯಲ್ಲಿ ಡಿಕೆಶಿ, ಸಚಿನ್ ನಾರಾಯಣ್ ಸಹಿತ ಇನ್ನಿತರ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.
ಅರ್ಜಿ ವಿಚಾರಣೆ ನಡೆಸಿದ ಆರ್ಥಿಕ ಅಪರಾಧ ಪ್ರಕರಣಗಳ ನ್ಯಾಯಾಲಯ ನಾಲ್ಕನೇ ಪ್ರಕರಣದಲ್ಲೂ ಸಚಿವ ಡಿ. ಕೆ. ಶಿವಕುಮಾರ್ ಹಾಗೂ ಇತರ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.
Comments are closed.