ಕರಾವಳಿ

ಅಕ್ಟೋಬರ್ 14 ರಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮಂಗಳೂರಿಗೆ..

Pinterest LinkedIn Tumblr

ಮಂಗಳೂರು ಅಕ್ಟೋಬರ್ 12 : ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರು ವಿವಿಧ ಕಾರ್ಯಕ್ರಮ ಗಳ ನಿಮಿತ್ತ ಅಕ್ಟೋಬರ್ 14 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.

ಅಕ್ಟೋಬರ್ 14 ರಂದು ಮಧ್ಯಾಹ್ನ 3.50 ಗಂಟೆಗೆ ಮಂಗಳೂರಿಗೆ ವಿಮಾನದ ಮೂಲಕ ಆಗಮಿಸಿ ಸಂಜೆ 4.30 ಗಂಟೆಗೆ ಕದ್ರಿ ಶಿವಬಾಗ್‍ನ ಸಿಟಿ ಕಾರ್ಪೋರೇಷನ್ ಕಟ್ಟಡದಲ್ಲಿ ಮಾನ್ಯ ವಿಧಾನ ಪರಿಷತ್ತಿನ ಸದಸ್ಯರ ಕಚೇರಿ ಉದ್ಘಾಟನೆ.

ಸಂಜೆ 5 ಗಂಟೆಗೆ ಟಿ.ಎಂ.ಎ.ಪೈ. ಇಂಟರ್ ನ್ಯಾಷನಲ್ ಕನ್ವೆನ್ಸನ್ ಸೆಂಟರ್, ಎಂ.ಜಿ. ರಸ್ತೆ ಮಂಗಳೂರು ಇಲ್ಲಿ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ(ರಿ.), ಮಂಗಳೂರು ಪ್ರೆಸ್ ಕ್ಲಬ್(ರಿ.) ಹಾಗೂ ಪತ್ರಿಕಾ ಭವನ ಟ್ರಸ್ಟ್(ರಿ) ಇವರ ವತಿಯಿಂದ ಆಯೋಜಿಸಿರುವ ಬ್ರ್ಯಾಂಡ್ ಮಂಗಳೂರು ಮತ್ತು ಪತ್ರಕರ್ತರ ಗ್ರಾಮ ವಾಸ್ತವ್ಯ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಸಂಜೆ 6 ಗಂಟೆಗೆ ಸಂತೋಷಿ ಕಲಾ ಮಂಟಪ, ಶ್ರೀ ಗೋಕರ್ಣನಾಥ ಕ್ಷೇತ್ರ, ಕುದ್ರೋಳಿ, ಮಂಗಳೂರು ಇಲ್ಲಿ ನವರಾತ್ರಿ ಮಹೋತ್ಸವ ಮತ್ತು ಮಂಗಳೂರು ದಸರಾ 2018ರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ರಾತ್ರಿ 9.20 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ 9.55 ಗಂಟೆಗೆ ವಿಮಾನದ ಮೂಲಕ ಬೆಂಗಳೂರಿಗೆ ವಾಪಾಸಾಗಲಿದ್ದಾರೆ.

Comments are closed.