
ಶಿವಮೊಗ್ಗ:ಲೋಕಸಭೆ ಉಪಚುನಾವಣೆಯ ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ. ಆದರೆ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ನಾಯಕರು ಪರಸ್ಪರ ಮುಖನೋಡಿಕೊಳ್ಳುತ್ತಿಲ್ಲ. ಮಂಗಳವಾರ 3ಗಂಟೆ ನಂತರ ಏನಾಗಲಿದೆ ಎಂದು ಕಾದು ನೋಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪುತ್ರ ಬಿವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೂರು ಕ್ಷೇತ್ರಗಳ ಫಲಿತಾಂಶಕ್ಕಾಗಿ ಎಲ್ಲರೂ ಕಾಯುತ್ತಿದ್ದಾರೆ ಎಂದರು.
ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಿದ್ದೇ ಎಚ್ ಡಿ ಕುಮಾರಸ್ವಾಮಿ ಎಂದು ಆರೋಪಿಸಿದರು. ರಾಜಕೀಯ ಬೆಳವಣಿಗೆಗೆ ಅಡ್ಡಿಯಾಗಲಿದ್ದಾರೆ ಎಂದು ಅವರು ಸೋಲಿಸಿದ್ದರು. ಹೀಗಾಗಿ ಎರಡೂ ಪಕ್ಷಗಳ ಮುಖಂಡರು ಪರಸ್ಪರ ಮುಖ ನೋಡಿಕೊಳ್ಳುತ್ತಿಲ್ಲ ಎಂದರು.
ನಮಗೇನೂ ಸರ್ಕಾರ ರಚಿಸಬೇಕೆಂಬ ಆತುರವಿಲ್ಲ.ಆದರೆ ನಾಳೆ ಮೂರು ಗಂಟೆ ನಂತರ ಜೆಡಿಎಸ್, ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ಮಟ್ಟದಲ್ಲಿ ಭಿನ್ನಮತ ಸ್ಫೋಟಗೊಳ್ಳಲಿದೆ ಎಂದು ಬಿಎಸ್ ವೈ ಭವಿಷ್ಯ ನುಡಿದಿದ್ದಾರೆ. ಈ ಹಿಂದೆಯೂ ಮೈತ್ರಿ ಸರ್ಕಾರದ ಅಸ್ತಿತ್ವದ ಬಗ್ಗೆ ಬಿಎಸ್ ಯಡಿಯೂರಪ್ಪ ಭವಿಷ್ಯ ನುಡಿದಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
Comments are closed.