ಕರ್ನಾಟಕ

ದೀಪಾವಳಿ ಪಟಾಕಿಗೆ ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಮುಂದಾಗಿರುವ ಸರ್ಕಾರ; ರಾಜ್ಯದಲ್ಲಿ ರಾತ್ರಿ 8 ರಿಂದ 10 ರವರಗೆ ಪಟಾಕಿ ಹೊಡೆಯಲು ಅವಕಾಶ

Pinterest LinkedIn Tumblr

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಯ ಮೂರು ದಿನಗಳ ಕಾಲ ಪ್ರತಿ ದಿನ ಕೇವಲ 2 ಗಂಟೆ ಮಾತ್ರ ಪಟಾಕಿ ಸಿಡಿಸಲು ರಾಜ್ಯ ಸರ್ಕಾರ ಅವಕಾಶ ನೀಡಿದ್ದು, ಇದಕ್ಕೆ ರಾತ್ರಿ 8ರಿಂದ 10 ಗಂಟೆಯವರೆಗೆ ಸಮಯ ನಿಗದಿ ಮಾಡಿದೆ.

ರಾಜ್ಯದಲ್ಲೂ ದೆಹಲಿ ಮಾದರಿಯಲ್ಲಿಯೇ ಪಟಾಕಿಗೆ ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ, ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಕಡ್ಡಾಯವಾಗಿ ಪಾಲಿಸಲು ನಿರ್ಧರಿಸಿದೆ.

ಈ ಸಂಬಂಧ ಶುಕ್ರವಾರ ಅಧಿಕಾರಿಗಳ ಜತೆ ಸಭೆ ನಡೆಸಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ್ ಭಾಸ್ಕರ್ ಅವರು, ನವೆಂಬರ್ 5ರಿಂದ ನವೆಂಬರ್ 8 ರವರೆಗೆ ಮೂರು ದಿನಗಳ ಕಾಲ ನಿತ್ಯ ಎರಡು ಗಂಟೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಬೇಕು ಎಂದು ಪೊಲೀಸ್ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳಿಗೂ ಸೂಚನೆ ನೀಡಿದ್ದಾರೆ.

ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ರಾತ್ರಿ 8 ರಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಹೊಡೆಯಬೇಕಿದೆ. ಜೊತೆಗೆ ಸರ್ಕಾರ ನಿರ್ಬಂಧ ವಿಧಿಸಿದ ಸ್ಥಳದಲ್ಲಿ ಪಟಾಕಿ ಹೊಡೆಯಬಾರದು ಎಂದ ನಿಯಮ ಜಾರಿಗೆ ಬರಲಿದೆ.

Comments are closed.