
ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿ(ಎಸ್) ಪಕ್ಷಗಳ ನಡುವಿನ ಸಂಪೂರ್ಣ ಸಮನ್ವಯವೇ ಮಿತ್ರಪಕ್ಷಗಳ ಅಭ್ಯರ್ಥಿಗಳ ಗೆಲುವಿಗೆ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ..
ಕಾಂಗ್ರೆಸ್ ಮತ್ತು ಜೆಡಿ(ಎಸ್) ಪಕ್ಷಗಳ ನಡುವಿನ ಸಂಪೂರ್ಣ ಸಮನ್ವಯವೇ ಮಿತ್ರಪಕ್ಷಗಳ ಅಭ್ಯರ್ಥಿಗಳ ಗೆಲುವಿಗೆ ಕಾರಣ.@INCKarnataka
— Siddaramaiah (@siddaramaiah) November 6, 2018
ಜನಾರ್ಧನ ರೆಡ್ಡಿಯವರ ಅಮಾನವೀಯ ನಡೆ-ನುಡಿಗೆ ಬಳ್ಳಾರಿ ಜನರೇ ಶಾಪ ನೀಡಿದ್ದಾರೆ.
ಬಳ್ಳಾರಿಯಲ್ಲಿ ನರಕಚತುರ್ದಶಿಯ ಅರ್ಥಪೂರ್ಣ ಆಚರಣೆ. ಕತ್ತಲೆಯಿಂದ ಬೆಳಕಿನ ಕಡೆಗೆ ಜನಪಯಣ ಎಂದು ಸಿದ್ದರಾಮಯ್ಯ ಟ್ವೀಟರ್ ಸಂದೇಶದಲ್ಲಿ ತಿಳಿಸಿದ್ದಾರೆ.
ಬಿಜೆಪಿಯ ನಕಾರಾತ್ಮಕ ರಾಜಕಾರಣ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಜನ ವಿರೋಧಿ ಆಡಳಿತವನ್ನು ಜನತೆ ತಿರಸ್ಕರಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
Resounding win for the @INCIndia & @JanataDal_S coalition in Karnataka. 4-1 thrashing to BJP.
People have rejected the negative politics of BJP in Karnataka and the abject failure of Modi govt in addressing people’s issues.
Congrats to all the winners.
— Dinesh Gundu Rao (@dineshgrao) November 6, 2018
ಅಭಿವೃದ್ದಿ ಕೇಂದ್ರಿತ ಆಡಳಿತವನ್ನು ಬೆಂಬಲಿಸುತ್ತಿರುವ ರಾಜ್ಯದ ಜನತೆಗೆ ಅಭಿನಂದನೆಗಳು. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗುವವರಿಗೆ ಜನರೇ ಉತ್ತರ ನೀಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಟ್ವೀಟ್ ಮಾಡಿದ್ದಾರೆ.
The results of Karnataka by-elections is the reflection of unity of the JDS-INC front. I am grateful to the leaders and party workers of both parties for their enormous contribution.@hd_kumaraswamy @siddaramaiah @DrParameshwara @dineshgrao @DKShivakumar
— H D Devegowda (@H_D_Devegowda) November 6, 2018
ಜೆಡಿಎಸ್- ಕಾಂಗ್ರೆಸ್ ಮೈತ್ರಿಗೆ ದೊಡ್ಡ ಗೆಲುವು ಸಿಕ್ಕಂತಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಪ್ರತಿಕ್ರಿಯಿಸಿದ್ದಾರೆ
Comments are closed.