
ಜಾರ್ಖಂಡ್: ಮಾಜಿ ಪತಿ ಮತ್ತು ಆತನ ಗೆಳೆಯರಿಂದ ಅತ್ಯಾಚಾರಕ್ಕೆ ಒಳಗಾಗಿ ಮಹಿಳೆ ಸಾವನ್ನಪ್ಪಿದ ಅಮಾನವೀಯ ಘಟನೆ ಜಾರ್ಖಂಡ್ ರಾಜ್ಯದ ಜಮ್ತಾರಾ ಜಿಲ್ಲೆಯಲ್ಲಿ ನಡೆದಿದೆ.
ಬುಧವಾರ ರಾತ್ರಿ ಮಹಿಳೆ ‘ಕಾಳಿ ಪೂಜೆ’ ಸಿನಿಮಾ ನೋಡಲು ತೆರಳಿದ್ದರು. ರಾತ್ರಿ ಸಿನಿಮಾದಿಂದ ಮನೆಗೆ ಹಿಂದಿರುಗುವ ವೇಳೆ ಎದುರಾದ ಮಾಜಿ ಪತಿ ಮತ್ತು ಆತನ ಇಬ್ಬರು ಸ್ನೇಹಿತರು ಮಹಿಳೆಯನ್ನು ಅಪಹರಿಸಿದ್ದಾರೆ.
ಮಹಿಳೆಯನ್ನು ನಾರಾಯಣಪುರ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಗ್ರಾಮದ ನಿರ್ಜನ ಪ್ರದೇಶಕ್ಕೆ ಎಳೆದೊಯ್ದಿದ್ದಾರೆ. ನಂತರ ಮೇಲೆ ಅತ್ಯಾಚಾರ ಎಸಗಿ ಸಂತ್ರಸ್ತೆಯ ಗುಪ್ತಾಂಗಕ್ಕೆ ಕಟ್ಟಿಗೆಯನ್ನು ತುರುಕಿ ಕ್ರೌರ್ಯ ಮೆರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುರುವಾರ ಬೆಳಗ್ಗೆ ಮಹಿಳೆಯ ಕಿರುಚಾಟ ಕೇಳಿದ ಗ್ರಾಮಸ್ಥರು ಕೂಡಲೇ ಸಂತ್ರಸ್ತೆಯನ್ನು ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೂಡಲೇ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ಸಂತ್ರಸ್ತೆ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರು ಈ ಬಗ್ಗೆ ಖಚಿತಪಡಿಸಿದ್ದಾರೆ.
ಈ ಸಂಬಂಧ ನಾರಾಯಣಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಮಹಿಳೆಯ ಮಾಜಿ ಪತಿಯನ್ನು ಬಂಧಿಸಲಾಗಿದೆ.
Comments are closed.