
ನವದೆಹಲಿ: 2002ರ ಗುಜರಾತ್ ಕೋಮು ಗಲಭೆ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶೇಷ ತನಿಖಾ ದಳ ನೀಡಿರುವ ಕ್ಲೀನ್ ಚಿಟ್ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ನ.19ರಂದು ವಿಚಾರಣೆಗೆ ತೆಗೆದುಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಮಂಗಳವಾರ ತಿಳಿಸಿದೆ.
ಗುಜರಾತ್ ಕೋಮು ಗಲಭೆಯ ಭಾಗವಾಗಿದ್ದ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದಲ್ಲಿ ಕಾಂಗ್ರೆಸ್ನ ಮಾಜಿ ಸಂಸದ ಇಶಾನ್ ಜೆಫ್ರಿ ಅವರೂ ಸೇರಿದಂತೆ ಒಟ್ಟು 69 ಮಂದಿ ಮೃತಪಟ್ಟಿದ್ದರು. 2002ರ ಫೆ.28ರಂದು ನಡೆದ ಈ ಹತ್ಯಾಕಾಂಡದ ಹಿಂದೆ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಸಂಚು ಅಡಗಿದೆ ಎಂದು ಆರೋಪಿಸಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ವಿಶೇಷ ತನಿಖಾ ದಳ (ಎಸ್ಐಟಿ) ನರೇಂದ್ರ ಮೋದಿ ಅವರಿಗೆ ಕ್ಲೀನ್ ಚಿಟ್ ನೀಡಿತ್ತು. ಇದನ್ನು ಪ್ರಶ್ನಿಸಿದ್ದ ಮೃತ ಇಶಾನ್ ಜೆಫ್ರಿ ಪತ್ನಿ ಜಾಕಿಯಾ ಜೆಫ್ರಿ ಅಹಮದಾಬಾದ್ ಹೈಕೋರ್ಟ್ಗೆ ಮೊರೆ ಹೋಗಿದ್ದರು. ಆದರೆ, ಹೈಕೋರ್ಟ್ ಎಸ್ಐಟಿಯ ವರದಿಯನ್ನು ಎತ್ತಿಹಿಡಿದಿತ್ತು.
ಹೋರಾಟ ಮುಂದವರಿಸಿರುವ ಜಾಕಿಯಾ ಜೆಫ್ರಿ ಅವರು, ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಜೆಫ್ರಿ ಅವರ ಅರ್ಜಿಯನ್ನು ಮಾನ್ಯ ಮಾಡಿರುವ ಸುಪ್ರೀಂ ಕೋರ್ಟ್ ನ. 19ರಂದು ಅರ್ಜಿಯ ವಿಚಾರಣೆ ನಡೆಸುವುದಾಗಿ ತಿಳಿಸಿದೆ.
Comments are closed.