ಕರಾವಳಿ

ಬೆಂಗ್ರೆಯಲ್ಲಿ ರೂ. 5 ಲಕ್ಷ ವೆಚ್ಚದ ರಸ್ತೆ ಕಾಂಕ್ರೀಟಿಕರಣಕ್ಕೆ ಶಾಸಕ ಕಾಮಾತ್ ಚಾಲನೆ

Pinterest LinkedIn Tumblr

ಮಂಗಳೂರು : ಬೆಂಗ್ರೆಯಲ್ಲಿ 5 ಲಕ್ಷ ವೆಚ್ಚದಲ್ಲಿ ರಸ್ತೆ ಕಾಂಕ್ರೀಟಿಕರಣಕ್ಕೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಚಾಲನೆ ನೀಡಿದರು.

ಮಂಗಳೂರಿನ ಕಸಬಾ ಬೆಂಗ್ರೆಯ ಎಆರ್ ಕೆ ಫೇರಿಯಿಂದ ಮಸೀದಿಗೆ ಹೋಗುವಂತಹ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಕಾಮತ್ ಅವರು, ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಯಿಂದ 5 ಲಕ್ಷ ರೂಪಾಯಿ ಅನುದಾನದಲ್ಲಿ ಈ ರಸ್ತೆಯನ್ನು ಕಾಂಕ್ರೀಟಿಕರಣ ಮಾಡಲಾಗುತ್ತಿದೆ. ಇದರಿಂದ ಈ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರಲಿದೆ. ಈಗಾಗಲೇ ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆಯಿಂದ ಐದು ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು ಅದರಲ್ಲಿ ಸುಮಾರು ಎಪ್ಪತ್ತು ಲಕ್ಷ ರೂಪಾಯಿಯನ್ನು ಬೆಂಗ್ರೆಯ ಅಭಿವೃದ್ಧಿಗೆ ಮೀಸಲಿಡಲಾಗುವುದು ಎಂದರು.

ಇನ್ನು ಹೆಚ್ಚುವರಿಯಾಗಿ 5 ಕೋಟಿ ರೂಪಾಯಿ ಅನುದಾನವನ್ನು ಅಲ್ಪಸಂಖ್ಯಾತರ ಅಭಿವೃದ್ಧಿಗೆ ಒದಗಿಸಲು ಸಚಿವರಲ್ಲಿ ಮನವಿ ಮಾಡಿದ್ದೇನೆ. ತಮ್ಮ ಮೊದಲ ಅವಧಿಯಲ್ಲಿಯೇ ಈ ಅನುದಾನವನ್ನು ಸಮರ್ಪಕವಾಗಿ ಬಳಸಲು ಪೂರ್ಣ ಪ್ರಯತ್ನ ಮಾಡಲಾಗುವುದು ಶಾಸಕರು ಎಂದು ಹೇಳಿದರು.

ಈ ವೇಳೆ ಮನಪಾ ಸದಸ್ಯೆ ಮೀರಾ ಕರ್ಕೆರಾ, ಬಿಜೆಪಿ ಮುಖಂಡರಾದ ವಸಂತ ಜೆ ಪೂಜಾರಿ, ಸಲೀಂ, ಪಣಂಬೂರು ಠಾಣಾಧಿಕಾರಿ ರಫೀಕ್ ಖಾನ್ ಸಹಿತ ಸ್ಥಳೀಯರು ಉಪಸ್ಥಿತರಿದ್ದರು.

Comments are closed.