ರಾಷ್ಟ್ರೀಯ

ಪುಲ್ವಾಮಾ ಎನ್​ಕೌಂಟರ್​; ಇಬ್ಬರು ಯೋಧರು ಹುತಾತ್ಮ-ಓರ್ವ ಉಗ್ರನ ಹತ್ಯೆ

Pinterest LinkedIn Tumblr

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದೆ. ಪುಲ್ವಾಮಾದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದ್ದು, ಈ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದು ಬಂದಿದೆ.

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ರತ್ನಿಪೋರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿ ಶೋಧ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಜೈಶ್​-ಇ-ಮುಹಮ್ಮದ್​​ ಗುಂಪಿನ ಉಗ್ರರು ಸೈನಿಕರ ಮೇಲೆ ಗುಂಡು ಹಾರಿಸಿದ್ದಾರೆ.

ಈ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಒಬ್ಬ ಯೋಧ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೈನಿಕರು ವಾಪಸ್​ ಉಗ್ರರ ಕಡೆ ಗುಂಡು ಹಾರಿಸಿ ಓರ್ವ ಉಗ್ರರನ್ನು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ಎನ್​ಕೌಂಟರ್​ನಲ್ಲಿ ಹುತಾತ್ಮರಾದ ಯೋಧರನ್ನು ಸೆಪೋಯ್ ಬಲ್ಜಿತ್ ಸಿಂಗ್ ಮತ್ತು ನಾಯಕ್ ಸನೀದ್ ಎಂದು ಗುರುತಿಸಲಾಗಿದೆ. ಅಂತೆಯೇ ಗಾಯಗೊಂಡ ಸೈನಿಕನನ್ನು ಹವಾಲ್ಜಾರ್ ಚಂದ್ರಪಾಲ್ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ಸೇನೆಯ 50 ರಾಷ್ಟ್ರೀಯ ರೈಫಲ್ಸ್, 182 ಸಿಆರ್​ಪಿಎಫ್​ ಮತ್ತು ಎಸ್​ಒಜಿ ಸೈನ್ಯ ಜಂಟಿ ಕಾರ್ಯಾಚರಣೆ ನಡೆಸಿದ್ದು, ಎನ್​ಕೌಂಟರ್​ ಮುಂದುವರೆದಿದೆ. ಪುಲ್ವಾಮಾ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮೊಬೈಲ್​ ಇಂಟರ್ನೆಟ್​ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

Comments are closed.