ಉಡುಪಿ: ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಪರ್ಯಾಯ ಪಲಿಮಾರು ಮಠಾಧೀಶರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು, ದೇಶದ ಏಳಿಗೆಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಗೆಲ್ಲಬೇಕು ಮತ್ತು ಗೆಲ್ಲುತ್ತಾರೆ, ದೇಶದ ಜನರ ಜೊತೆಗೆ ದೇವರ ಆಶೀರ್ವಾದ ಕೂಡ ಅವರ ಮೇಲೆ ಇದ್ದೇ ಇರುತ್ತದೆ ಎಂದು ಶುಭಹಾರೈಸಿದರು.
ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ನಿರ್ಮಲಾ ಸೀತಾರಾಮನ್ ಅವರು ಭಾಗವಹಿಸಲಿದ್ದು ಈ ಸಂದರ್ಭದಲ್ಲಿ ಸಚಿವರ ಜೊತೆಗೆ ಉಡುಪಿ ಶಾಸಕ ಕೆ. ರಘುಪತಿ ಭಟ್ ಕೂಡ ಜೊತೆಗಿದ್ದರು.
Comments are closed.