ಮನೋರಂಜನೆ

ನಾಲ್ಕು ಭಾಷೆಗಳಲ್ಲಿ ದರ್ಶನ್ ಅಭಿನಯದ ಮುನಿರತ್ನ ಕುರುಕ್ಷೇತ್ರ ಪೋಸ್ಟರ್ ಬಿಡುಗಡೆ!

Pinterest LinkedIn Tumblr


ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ಅಭಿನಯದ ‘ಮುನಿರತ್ನ ಕುರುಕ್ಷೇತ್ರ’ ನಾಲ್ಕು ಭಾಷೆಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರತಂಡ ತಿಳಿಸಿತ್ತು. ಇಂದು ನಾಲ್ಕು ಭಾಷೆಯ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಶೀಘ್ರದಲ್ಲಿಯೇ ಸಿನಿಮಾ ಬಿಡುಗಡೆ ಆಗಲಿದೆ ಎಂಬ ಸಿಹಿ ಸುದ್ದಿಯನ್ನು ಚಿತ್ರತಂಡ ತಿಳಿಸಿದೆ.

ಈ ವರ್ಷದ ಮೊದಲ ವಾರದಲ್ಲಿಯೇ ಮುನಿರತ್ನ ಕುರುಕ್ಷೇತ್ರ ಬಿಡುಗಡೆ ಆಗಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದ್ರೆ ನಿರ್ದೇಶಕರು ಪ್ರತಿ ಫ್ರೇಮ್‍ನಲ್ಲಿಯಲ್ಲಿ ಅಚ್ಚುಕಟ್ಟು ಬಯಸುತ್ತಿರುವದರಿಂದ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ ಆಗುತ್ತಿತ್ತು. ಅಂತೆಯೇ ಎಲ್ಲ ನಾಲ್ಕು ಭಾಷೆಗಳಲ್ಲಿ ಡಬ್ಬಿಂಗ್ ಕೆಲಸ ನಡೆಯುತ್ತಿದ್ದರಿಂದ ಸಿನಿಮಾ ರಿಲೀಸ್ ತಡವಾಗುತ್ತಿದೆ ಎಂದು ನಿರ್ಮಾಪಕ ಮುನಿರತ್ನ ಸುದ್ದಿಗೋಷ್ಠಿಯಲ್ಲಿ ಈ ಹಿಂದೆ ತಿಳಿಸಿದ್ದರು. ಇಂದು ಫೇಸ್‍ಬುಕ್ ಪೋಸ್ಟ್ ಮೂಲಕ ಕನ್ನಡ, ತಮಿಳು, ತೆಲಗು ಮತ್ತು ಮಲಯಾಳಂ ಭಾಷೆಯಲ್ಲಿ ಪೋಸ್ಟರ್ ಬಿಡುಗಡೆಗೊಳಿಸಿದೆ.

ಬಹು ತಾರಾಗಣವುಳ್ಳ ಚಿತ್ರದಲ್ಲಿ ಅಂಬರೀಶ್, ರವಿಚಂದ್ರನ್, ಅರ್ಜುನ್ ಸರ್ಜಾ, ಶಶಿಕುಮಾರ್, ನಿಖಿಲ್ ಕುಮಾರಸ್ವಾಮಿ, ಭಾರತಿ ವಿಷ್ಣುವರ್ಧನ್, ಮೇಘನಾ ರಾಜ್, ಹರಿಪ್ರಿಯಾ ಸೇರಿದಂತೆ ನೂರಾರು ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಚಿತ್ರೀಕರಣ ಪೂರ್ಣಗೊಳಿಸಿರುವ ಕುರುಕ್ಷೇತ್ರ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ನಾಲ್ಕು ಭಾಷೆಗಳಲ್ಲಿ ಸಿನಿಮಾ ಅತಿ ಶೀಘ್ರದಲ್ಲಿ ಬಿಡುಗಡೆ ಆಗಲಿದೆ ಎಂಬುದನ್ನು ಚಿತ್ರತಂಡ ಸ್ಪಷ್ಟಪಡಿಸಿದೆ.

Comments are closed.