
ಮಂಗಳೂರು : ಪದವಿನಂಗಡಿ ಗುರುನಗರದ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದ 51ನೇ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಅಂದು ಬಳಿಗ್ಗೆ ಶ್ರೀ ನಾರಾಯಣ ಗುರು ಮಂದಿರದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು.
ಸಂಜೆ ಸಂಘದ ಅಧ್ಯಕ್ಷರಾದ ಗಣೇಶ್ ಎ. ಬಂಗೇರ ಅವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಎನ್‌ಎಂಪಿಟಿ ಕಂಟ್ರಾಕ್ಟರ್ ಭರತ್ ಬಂಗೇರ, ಭಾರತ್ ಆಗ್ರೊ ವೆಟ್‌ನ ಅರುಣ್ ಕುಮಾರ್ ರೈ, ಕಾವೂರು ಸಹಕಾರ ಬ್ಯಾಂಕ್‌ನ ಅಧ್ಯಕ್ಷ ಕೆ. ಹರಿಶ್ಚಂದ್ರ, ಇಲೆಕ್ಟ್ರಿಕಲ್ ಕಂಟ್ರಾಕ್ಟರ್ ಸೀತಾರಾಮ ಜಪ್ಪು, ಆಪಲ್ ಫ್ಲೈ ನ ಅನಿಲ್ ಬೋಂದೆಲ್, ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಖ್ಯಾತ ರಂಗಕರ್ಮಿ ಸತೀಶ್ ಬಂದಲೆ, ಮುಖ್ಯ ಅತಿಥಿಗಳಾಗಿದ್ದರು.
ಸಂಘದ ಮಹಾ ಪೋಷಕರಾದ ನಾರಾಯಣ ಮೇಸ್ತ್ರಿ, ಯುವ ವಿಭಾಗದ ಅಧ್ಯಕ್ಷ ತಿಲಕ್ ರಾಜ್ ವೇದಿಕೆಯಲ್ಲಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ನಾನಿಲ್, ಹಿರಿಯ ಸಂಗೀತ ನಿರ್ದೇಶಕರಾದ ಸಾರಂಗಪಾಣಿ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 90% ಕ್ಕಿಂತ ಅಧಿಕ ಅಂಕ ಗಳಿಸಿ ಉತ್ತೀರ್ಣರಾದ ಮೂರು ಮಂದಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಸಂಘದ ಮಹಿಳಾ ವಿಭಾಗದ ಸದಸ್ಯೆಯರು ಪ್ರಾರ್ಥಿಸಿದರು. ಉಪಾಧ್ಯಕ್ಷರಾದ ಎಂ. ಮಧುಚಂದ್ರ ಗುರುನಗರ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಉದಯ ಕುಮಾರ್ ಪಚ್ಚನಾಡಿ ವರದಿ ಮಂಡಿಸಿದರು. ಸುಧಾಕರ ಅಂಚನ್ ಪಚ್ಚನಾಡಿ ಸಾಂಸ್ಕೃತಿಕ ಕಾರ್ಯಕ್ರಮ ನಿರ್ವಹಿಸಿ, ಸನ್ಮಾನ ಪತ್ರ ವಾಚಿಸಿದರು. ಬಾಲಕೃಷ್ಣ ಯೆಯ್ಯಾಡಿ ಕಾರ್ಯಕ್ರಮ ನಿರ್ವಹಿಸಿದರು. ಮಹಿಳಾ ವಿಭಾಗದ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಪ್ರತಿಮ್ ವಂದಿಸಿದರು.
Comments are closed.