
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಕಾಂಗ್ರೆಸ್ ಪಾಳಯದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಧ್ಯಕ್ಷ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದರೆ. ಆದರೆ ಕಾಂಗ್ರೆಸ್ ಹಿರಿಯ ನಾಯಕರು ಇದನ್ನು ವಿರೋಧಿಸಿದ್ದು, ಅಧ್ಯಕ್ಷ ಸ್ಥಾನದಲ್ಲೇ ಮುಂದುವರೆಯುವಂತೆ ಒತ್ತಾಯಿಸಿದ್ದಾರೆ. ಆದರೆ ಪಟ್ಟು ಬಿಡದ ರಾಹುಲ್ ಗಾಂಧಿ ಈವರೆಗೂ ರಾಜೀನಾಮೆ ಹಿಂಪಡೆದಿಲ್ಲ.
ಈ ಸಭೆಯಲ್ಲಿ ಹಿರಿಯ ನಾಯಕರ ವಿರುದ್ಧ ಆಕ್ರೊಶ ವ್ಯಕ್ತಪಡಿಸಿರುವ ರಾಹುಲ್ ಗಾಂಧಿ ಪಕ್ಷದ ಹಿರಿಯ ನಾಯಕರೆಲ್ಲಾ ತಮ್ಮ ಮಕ್ಕಳನ್ನು ಮೇಲೆ ತರುವುದರಲ್ಲೇ ತಲ್ಲೀನರಾಗಿದ್ದಾರೆ. ಅದೇನಿದ್ದರೂ ತಾನು ಪಕ್ಷ ಸಂಘಟಿಸಲು ಶ್ರಮಿಸುತ್ತೇನೆ. ಆದರೆ ರಾಜೀನಾಮೆ ಹಿಂಪಡೆಯಲ್ಲ ಎಂದಿದ್ದಾರೆ. ಈ ವಿಚಾರದಲ್ಲಿ ಸಹೋದರಿ ಪ್ರಿಯಾಂಕಾ ಗಾಂಧಿ ಕೂಡಾ ರಾಹುಲ್ ಜೊತೆಗಿದ್ದಾರೆ ಎನ್ನಲಾಗಿದೆ. ಇದೇ ಸಂದರ್ಭದಲ್ಲಿ ತನ್ನ ಸಹೋದರಿ ಪ್ರಿಯಾಂಕಾ ಕೂಡಾ ಕಾಂಗ್ರೆಸ್ ಅಧ್ಯಕ್ಷೆಯಾಗಲು ಸಾಧ್ಯವಿಲ್ಲ ಎಂಬುವುದನ್ನು ರಾಹುಲ್ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.
ಇತ್ತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಹುಲ್ ಗಾಂಧಿಗೆ ರಾಜೀನಾಮೆ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ ಎಂದು ಹೇಳಲಾಗಿದೆ. ಸಭೆ ಬಳಿಕ ಕಾಂಗ್ರೆಸ್ ಮುಖಂಡರು ಮಾಧ್ಯಮಗಳಿಗೆ ಪ್ರತಿಕ್ರಿಯಿಸದೆ ತೆರಳಿದ್ದರು. ಅದರೆ ಕಾಂಗ್ರೆಸ್ ವಕ್ತಾರ ಸುರ್ಜೇವಾಲಾ ಈ ಕುರಿತಾಗಿ ಮಾಹಿತಿ ನೀಡುತ್ತಾ ಸಭೆಯಲ್ಲಿ ರಾಹುಲ್ ಗಾಂಧಿ ರಾಜೀನಾಂಎ ನೀಡಿದ್ದರು. ಆದರೆ ಇದನ್ನು ಯಾರೂ ಅಂಗೀಕರಿಸಿಲ್ಲ ಎಂದಿದ್ದರು.
Comments are closed.