ಕರ್ನಾಟಕ

ರಾಜ್ಯದಲ್ಲೂ‌ ಬೃಹತ್ ತಿರುಪತಿ​ ತಿಮ್ಮಪ್ಪನ ದೇಗುಲ ನಿರ್ಮಾಣ

Pinterest LinkedIn Tumblr


ಬೆಂಗಳೂರು: ತಿರುಪತಿ ತಿಮ್ಮಪ್ಪನ ದೇವಸ್ಥಾನದಂತೆಯೇ ರಾಜ್ಯದಲ್ಲೂ‌ ಬೃಹತ್​ ತಿಮ್ಮಪ್ಪನ ದೇಗುಲ ನಿರ್ಮಾಣವಾಗಲಿದೆ. ರಾಮನಗರ ಜಿಲ್ಲೆಯಲ್ಲಿ 15 ಎಕರೆ ಪ್ರದೇಶದಲ್ಲಿ ತಿಮ್ಮಪ್ಪನ ದೇವಸ್ಥಾನ ನಿರ್ಮಾಣವಾಗಲಿದೆ.

ರಾಮನಗರದಲ್ಲಿ ತಿಮ್ಮಪ್ಪನ ದೇಗುಲ ನಿರ್ಮಾಣ ಮಾಡಲು ರಾಜ್ಯ ಸರ್ಕಾರದಿಂದ 15 ಎಕರೆ ಭೂಮಿ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ಸಿಎಂ ಎಚ್​.ಡಿ.ಕುಮಾರಸ್ವಾಮಿ ಇಂದು ದೇಗುಲ ನಿರ್ಮಾಣಕ್ಕೆ ಭೂಮಿ ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ. ತಿರುಪತಿ ತಿಮ್ಮಪ್ಪನ ದೇವಸ್ಥಾನದ ಮಾದರಿಯಲ್ಲೇ ರಾಮನಗರದಲ್ಲಿ ದೇವಾಲಯ ನಿರ್ಮಾಣವಾಗಲಿದೆ. ದೇವಸ್ಥಾನ ನಿರ್ಮಾಣ ಕಾರ್ಯವನ್ನು ಸಂಪೂರ್ಣವಾಗಿ ತಿರುಪತಿ ತಿರುಮಲ ದೇವಸ್ಥಾನಂ (ಟಿಟಿಡಿ) ಟ್ರಸ್ಟ್​​ ನೋಡಿಕೊಳ್ಳಲಿದೆ.

ಇಂದು ಸಿಎಂ ಜೊತೆ ಮುಜರಾಯಿ ಇಲಾಖೆ ಸಚಿವ ಪಿಟಿ ಪರಮೇಶ್ವರ್ ಮತ್ತು ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಟಿಟಿಡಿ ರಾಜ್ಯ ಸರ್ಕಾರಕ್ಕೆ ಈ ಹಿಂದೆಯೇ ಜಾಮೀನು ಮಂಜೂರಾತಿಗೆ ಮನವಿ ಸಲ್ಲಿಸಿತ್ತು. ತಿಮ್ಮಪ್ಪನ‌ ದೇಗುಲ ನಿರ್ಮಾಣದ ಜೊತೆಗೆ ರಾಜ್ಯದ ಆರು ದೇವಸ್ಥಾನಗಳ ಜೀರ್ಣೋದ್ಧಾರಕ್ಕೂ ಸರ್ಕಾರ ಅಸ್ತು ಎಂದಿದೆ.

ಇದನ್ನೂ ಓದಿ: ಜನಾರ್ದನ ರೆಡ್ಡಿ ಬಳ್ಳಾರಿಗೆ ಹೋಗಲು ಅನುಮತಿ ನೀಡಿದ ಸುಪ್ರೀಂಕೋರ್ಟ್​

ರಾಜ್ಯದ ಐತಿಹಾಸಿಕ ಹಾಗೂ ಪಾರಂಪರಿಕ ದೇವಾಲಯಗಳ ಮೂಲಭೂತ ಸೌಲಭ್ಯ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದಾರೆ. ಇತಿಹಾಸ ಪ್ರಸಿದ್ಧ ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ 21 ಕೋಟಿ ರೂ. ಅನುದಾನ ನೀಡಲು ಸರ್ಕಾರ ಆದೇಶಿಸಿದೆ.

Comments are closed.