
ಕೊಪ್ಪಳ: ಇನ್ನೊಂದು ಚುನಾವಣೆಗೆ ಸಿದ್ದ ಎಂಬ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು, ನಿಮಗೆ ಯೋಗ್ಯತೆ ಇದ್ದರೆ ಸರ್ಕಾರ ಮಾಡಿ. ಇಲ್ಲ ಬಿಟ್ಟು ಹೋಗಿ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಕೊಪ್ಪಳ ಪ್ರವಾಸಿ ಮಂದಿರದಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅಪ್ಪ – ಮಗ ಆಡುವ ಆಟವನ್ನು ಕರ್ನಾಟಕದ ಜನ ಒಪ್ಪುವುದಿಲ್ಲ. ಒಂದೇ ವರ್ಷದಲ್ಲಿ ಇನ್ನೊಂದು ಚುನಾವಣೆ ಮಾಡಲು ಬಿಡುವುದಿಲ್ಲ ಎಂದು ಅವರು ನುಡಿದರು.
ಅಷ್ಟೇ ಅಲ್ಲದೇ ಸಾಮಾನ್ಯ ಜನರು ತಾಜ್ ವೆಸ್ಟ್ ಎಂಡ್ ಹೋಟೆಲ್ ಗೆ ಹೋಗಲು ಆಗುವುದಿಲ್ಲ. ಸರ್ಕಾರ ಎಲ್ಲಿ ಬದುಕಿದೆ(?) ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರಶ್ನೆ ಮಾಡಿದರು. ಕಿಕ್ ಬ್ಯಾಕ್ ಹಣಕ್ಕೆ ಸರ್ಕಾರಿ ಆಸ್ತಿ ಮಾರಾಟ ಮಾಡಲಾಗ್ತಿದೆ. ಸರ್ಕಾರಕ್ಕೆ ಕಿಕ್ ಬ್ಯಾಕ್ ಹಣ ಹೋಗಿದೆ ಎಂದು ದೋಸ್ತಿ ಸರ್ಕಾರದ ವಿರುದ್ಧ ಆರೋಪ ಮಾಡಿದರು.
ಇನ್ನು ಸಿಎಂ ಗ್ರಾಮ ವಾಸ್ತವ್ಯ ಮಾಡ್ತಿದ್ದಾರೆ ಇದಕ್ಕೆ ನನ್ನ ವಿರೋಧವಿಲ್ಲ. ಬರಗಾಲದಲ್ಲಿ ನೀವು ಎಲ್ಲೂ ಹೋಗಿಲ್ಲ. ಈ ಹಿಂದೆ ನೀವು ಗ್ರಾಮ ವಾಸ್ತವ್ಯ ಮಾಡಿದ್ದ ಗ್ರಾಮದ ಸ್ಥಿತಿ ಹೇಗಿದೆ ನೋಡಿ ಎಂದು ಬಿಎಸ್ ಯಡಿಯೂರಪ್ಪ ಹೇಳಿದರು.
Comments are closed.