ಕರಾವಳಿ

ಉಡುಪಿಯಲ್ಲಿ ಟಿಪ್ಪರ್ ಪಲ್ಟಿಯಾಗಿ ಇಬ್ಬರು ದುರ್ಮರಣ, ಓರ್ವನಿಗೆ ಗಾಯ: ಗಾಯಾಳುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ ಕೋಟ

Pinterest LinkedIn Tumblr
ಉಡುಪಿ: ಹೆದ್ದಾರಿಯಲ್ಲಿ ಡಿವೈಡರ್ ಏರಿದ ಟಿಪ್ಪರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಹಾಗೂ ಇನ್ನೋರ್ವ ಆಸ್ಪತ್ರೆಯಲ್ಲಿ  ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆ ಕೆ.ಜಿ ರೋಡ್ ಸಮೀಪ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
 
ಅಪಘಾತದಲ್ಲಿ ಭಟ್ಕಳ ಮೂಲದ ಕುಮಾರ್, ಗಾಯಾಳು ಕುಂದಾಪುರದ ನಾಗರಾಜ್ ಇಬ್ಬರು ಸಾವನ್ನಪ್ಪಿದ್ದಾರೆ.

ಟಿಪ್ಪರ್ ಅಡಿಯಲ್ಲಿ ಸಾವು- ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಕಾರ್ಮಿಕನನ್ನು ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.

ಅಪಘಾತದ ಪರಿಣಾಮ ಟಿಪ್ಪರ್ ಅಡಿ ಇಬ್ಬರು ವ್ಯಕ್ತಿ ಸಿಲುಕಿದ್ದರು. ಡಿಕ್ಕಿಯಾದ ರಭಸಕ್ಕೆ ಒಬ್ಬ ಟಿಪ್ಪರ್ ಅಡಿಗೆ ಎಸೆಯಲ್ಪಟ್ಟಿದ್ದ. ಈ ಅಪಘಾತದಲ್ಲಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಟಿಪ್ಪರ್ ಒಳಗಿದ್ದ ಇಬ್ಬರು ಸಿಕ್ಕಿಹಾಕಿಕೊಂಡು ಒದ್ದಾಡುತ್ತಿದ್ದರು. ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಇದೇ ರಸ್ತೆಯಲ್ಲಿ ಹೋಗುತ್ತಿದ್ದರು.
ಈ ಸಂದರ್ಭ ಅಪಘಾತವಾದ ಸ್ಥಳದಲ್ಲಿ ಕೋಟ ಶ್ರೀನಿವಾಸ ಪೂಜಾರಿ ತುರ್ತು ಕಾರ್ಯಾಚರಣೆ ಕೈಗೊಂಡರು. ಫೋನ್ ಮಾಡಿ ಕ್ರೈನ್, ಅಂಬುಲೆನ್ಸ್ ಸ್ಥಳಕ್ಕೆ ಕರೆಸಿದ್ದಾರೆ. ಸಾರ್ವಜನಿಕರನ್ನು ಒಟ್ಟು ಮಾಡಿ ಇಬ್ಬರು ಕಾರ್ಮಿಕರ ಪ್ರಾಣ ರಕ್ಷಣೆಗೆ ಮುಂದಾಗಿದ್ದಾರೆ. ಅಲ್ಲದೆ ಇಬ್ಬರು ಕಾರ್ಮಿಕರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.
ಶೀಘ್ರ ಚಿಕಿತ್ಸೆ ನೀಡಿದ್ದರಿಂದ ಟಿಪ್ಪರ್ ಅಡಿಯಲ್ಲಿ ಸಿಲುಕಿದ್ದ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದು, ಮತ್ತೊಬ್ಬ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Comments are closed.