
ವೆಸ್ಟ್ ಇಂಡೀಸ್ ತಂಡದ ಮಾಜಿ ನಾಯಕ ಬ್ರಿಯಾನ್ ಲಾರಾ ಎದೆನೋವಿನಿಂದ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಿಢೀರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬ್ರಿಯಾನ್ ಲಾರಾ ಅವರನ್ನು ಪ್ಯಾರೆಲ್ ಪ್ರದೇಶದ ಗ್ಲೋಬಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬ್ರಿಯಾನ್ ಲಾರಾ ಅವರನ್ನು ಆಸ್ಪತ್ರೆಗೆ ದಾಖಲಿಸಿರುವ ವಿಚಾರವನ್ನು ಎಎನ್ಐ ಖಚಿತಗೊಳಿಸಿದ್ದು, ಅವರ ಆರೋಗ್ಯ ಸ್ಥಿತಿ ಸಧ್ಯ ಹೇಗಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಸಧ್ಯ ಬ್ರಿಯಾನ್ ಲಾರಾ, ಸ್ಟಾರ್ ಸ್ಪೋರ್ಟ್ಸ್ನ ಕ್ರಿಕೆಟ್ ವಿಶ್ಲೇಷಕರಾಗಿ ಕಾರ್ಯನಿರ್ವಹಿಸುತ್ತಿರೋದರಿಂದ ಭಾರತದಲ್ಲೇ ವಾಸ್ತವ್ಯ ಹೂಡಿದ್ದಾರೆ.
ಕ್ರಿಕೆಟ್ನಲ್ಲಿ ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿರುವ ಲಾರಾ, ಟೆಸ್ಟ್ ಪಂದ್ಯದಲ್ಲಿ 400 ರನ್ ಸಿಡಿಸಿದ ಮೊದಲ ಬ್ಯಾಟ್ಸಮನ್ ಎಂಬ ದಾಖಲೆಯನ್ನು ಇನ್ನು ತಮ್ಮ ಹೆಸರಿನಲ್ಲೇ ಉಳಿಸಿಕೊಂಡಿದ್ದಾರೆ. 131 ಟೆಸ್ಟ್ ಹಾಗೂ 299 ಏಕದಿನ ಪಂದ್ಯಗಳಲ್ಲಿ ಲಾರಾ ಆಟವಾಡಿದ್ದಾರೆ.
Comments are closed.