
ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ಕೇಂದ್ರ ರೈಲ್ವೆ ಸಚಿವರಾದ ಪಿಯೂಶ್ ಗೋಯಲ್ ಅವರನ್ನ ಭೇಟಿ ಮಾಡಿ, ಅಭಿವೃದ್ಧಿ ವಿಚಾರವಾಗಿ ಮಾತುಕತೆ ನಡೆಸಿದರು.
ದಿನನಿತ್ಯ ಮೈಸೂರು- ಮಂಡ್ಯ-ಬೆಂಗಳೂರು ನಡುವೆ ರೈಲಿನಲ್ಲಿ ಪ್ರಯಾಣಿಸುತ್ತಿರುವ ಮಹಿಳೆಯರಿಗೆ ಹೆಚ್ಚಿನ ಮಹಿಳಾ ಬೋಗಿಗಳನ್ನು ಅಳವಡಿಸುವಂತೆ ಹಾಗೂ ಹೆಚ್ಚಿನ ಪೊಲೀಸ್ ಬಂದೋಬಸ್ತುಗಳನ್ನು ಒದಗಿಸುವಂತೆ ಮತ್ತು ಮುಂಬೈ ಮಾದರಿಯಲ್ಲಿ ವಿಶೇಷ ಮಹಿಳಾ ರೈಲನ್ನು ಬೆಳಿಗ್ಗೆ ಮತ್ತು ಸಂಜೆ ಕೆಲಸಕ್ಕೆ ತೆರಳುವ ಮಹಿಳೆಯರಿಗೆ ಅನುಕೂಲ ಮಾಡಿಕೊಡುವಂತೆ ಸುಮಲತಾ ಮನವಿ ಮಾಡಿದ್ದಾರೆ.
ಅಲ್ಲದೇ, ಕೆ.ಆರ್.ನಗರದಲ್ಲಿ ರೈಲ್ವೆ ಪೊಲೀಸ್ ಫೋರ್ಸ್ ಟ್ರೈನಿಂಗ್ ಸೆಂಟರನ್ನು ತೆರೆಯಲು ಸುಮಲತಾ ಮನವಿ ಮಾಡಿದ್ದು, ಈ ಟ್ರೈನಿಂಗ್ ಸೆಂಟರ್‌ನಿಂದ ಸ್ಥಳೀಯವಾಗಿ ಹೆಚ್ಚಿನ ಉದ್ಯೋಗಾವಕಾಶಗಳು ದೊರೆಯುವ ಸಾಧ್ಯತೆಗಳಿಗೆ ಎಂದ ಸುಮಲತಾ ಈ ವಿಷಯವನ್ನ ತಮ್ಮ ಫೇಸ್‌ಬುಕ್‌ನಲ್ಲಿ ಶೇರ್ ಮಾಡಿದ್ದಾರೆ.
Comments are closed.