
ರಾಜ್ಯ ಸಮ್ಮಿಶ್ರ ಸರಕಾರ ಈಗ ಸಂಕಷ್ಟ ಎದುರಿಸುವ ಸಾಧ್ಯತೆ ಹೆಚ್ಚಾಗಿದೆ. ಆನಂದ್ ಸಿಂಗ್ ರಾಜೀನಾಮೆ ನೀಡಿದ ನಂತರ ಈಗ ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಕೂಡ
ಬೆಂಗಳೂರು: ಸಮ್ಮಿಶ್ರ ಸರಕಾರಕ್ಕೆ ಸಂಕಷ್ಟ ಎದುರಾಗುವ ಲಕ್ಷಣಗಳು ಗೋಚರಿಸುತ್ತಿವೆ.

ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿದ ಬೆನ್ನಲ್ಲೇ ಗೋಕಾಕ ಕ್ಷೇತ್ರದ ಶಾಸಕ, ಬಂಡಾಯದ ಬಾವುಟ ಹಾರಿಸಿ ರೆಬೆಲ್ ಆಗಿರುವ ರಮೇಶ್ ಜಾರಕಿಹೊಳಿ ಕೂಡ ರಾಜೀನಾಮೆ ನೀಡಿದ್ದಾರೆ.
ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ನೇರವಾಗಿ ಭೇಟಿಯಾಗದೆ ಕಚೇರಿಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ ಎಂದು ಹೇಳಲಾಗಿದೆ.
ಕೈ ಬರಹದಲ್ಲಿ ರಾಜೀನಾಮೆ ಪತ್ರ ಬರೆದು ರಮೇಶ್ ಜಾರಕಿಹೊಳಿ ಫ್ಯಾಕ್ಸ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಆದರೆ ಈ ವಿಷಯವನ್ನು ಸ್ಪೀಕರ್ ಕಚೇರಿ ಇನ್ನೂ ದೃಡೀಕರಿಸಿಲ್ಲ.
ರಾಜೀನಾಮೆ ಸಲ್ಲಿಸಬೇಕಾದರೆ ಸ್ಪೀಕರ್ ಭೇಟಿಯಾಗಿ ಖುದ್ದಾಗಿ ರಾಜೀನಾಮೆ ಸಲ್ಲಿಸಬೇಕು. ಆದರೆ ರಮೇಶ್ ಜಾರಕಿಹೊಳಿ ಸಲ್ಲಿಸಿರುವ ರಾಜೀನಾಮೆ ಅಂಗೀಕರವಾಗುತ್ತದಾ ಇಲ್ಲವೋ ಎನ್ನುವುದು ಖಾತರಿಯಾಗಿಲ್ಲ.
ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ರಮೇಶ್ ಜಾರಕಿಹೊಳಿ ಮಂಗಳವಾರ ಭೇಟಿಯಾಗುವ ಸಾಧ್ಯತೆ ಇದೆ.
Comments are closed.