ರಾಷ್ಟ್ರೀಯ

ಸಬ್ಸಿಡಿ ರಹಿತ ಅಡುಗೆ ಅನಿಲ ದರ 100 ರೂ. ಇಳಿಕೆ

Pinterest LinkedIn Tumblr


ನವದೆಹಲಿ: ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್‌ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ ಎಂದು ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಸಂಸ್ಥೆ ಇಂಡಿಯನ್ ಆಯಿಲ್ ಕಾರ್ಪೊರೇಷನ್(ಐಒಸಿ) ತಿಳಿಸಿದೆ. ಇದರಿಂದಾಗಿ ದೆಹಲಿಯಲ್ಲಿ ಪ್ರತಿ ಸಿಲಿಂಡರ್ ಬೆಲೆ 737.50 ರೂ. ನಿಂದ 637 ರೂಪಾಯಿಗಳಿಗೆ ಇಳಿದಿದೆ.

ಇನ್ನು ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಹೊಸ ದರ ಜುಲೈ 1 ರಿಂದ ಜಾರಿಗೆ ಬರಲಿದೆ.

Comments are closed.