
ಭಾರತದ ವಿವಿಧ ಭಾಷೆಗಳ ಸಿನೆಮಾ ಸೇರಿದಂತೆ ಮುಂಬರುವ ಅತೀ ನಿರೀಕ್ಷಿತ ಭಾರತೀಯ ಚಲನಚಿತ್ರಗಳ ಪಟ್ಟಿಯಲ್ಲಿ ಬಹಳಷ್ಟು ನಿರೀಕ್ಷೆ ಹುಟ್ಟು ಹಾಕಿರುವ ‘ಯಾನ’ ಕನ್ನಡ ಸಿನೆಮಾ ನಾಲ್ಕನೇ ಸ್ಥಾನ ಪಡೆಯುವ ಮೂಲಕ ಕನ್ನಡ ಚಿತ್ರರಂಗದಲ್ಲಿ ಸುದ್ದಿ ಮಾಡುತ್ತಿದೆ.
‘ಐಎಮ್‌ಡಿಬಿ'(IMDb) ಬಿಡುಗಡೆ ಮಾಡಿರುವ ಅತೀ ಹೆಚ್ಚು ನಿರೀಕ್ಷಿತ ಮುಂಬರುವ ಸಿನೆಮಾಗಳ ಪೈಕಿ ‘ಯಾನ’ ನಾಲ್ಕನೇ ಸ್ಥಾನ ಪಡೆದಿರುವುದು ಸಿನಿ ಪ್ರಿಯರಲ್ಲಿ ಇನ್ನಷ್ಟು ನಿರೀಕ್ಷೆ ಹೆಚ್ಚಿಸಿದೆ.
ಹದಿಹರಯದ ಹೆಣ್ಣುಮಕ್ಕಳ ನವಿರಾದ ಪ್ರೇಮಕಥೆ ಇರುವ ‘ಯಾನ’ ಸಿನೆಮಾದ ಹಾಡುಗಳು, ಟ್ರೇಲರ್ ಸಾಮಾಜಿಕ ತಾಣಗಳಲ್ಲಿ ಸಖತ್ ವೈರಲ್ ಆಗಿದೆ.
ACME ಮೂವೀಸ್ ಇಂಟರ್ನ್ಯಾಷನಲ್ ಬ್ಯಾನರಿನಡಿಯಲ್ಲಿ ಮಂಗಳೂರು ಮೂಲದ ದುಬೈಯ ಹೆಸರಾಂತ ಉದ್ಯಮಿ, ನಿರ್ಮಾಪಕರಾಗಿರುವ ಹರೀಶ್ ಶೇರಿಗಾರ್ ಮತ್ತು ಶರ್ಮಿಳಾ ಶೇರಿಗಾರ್ ಹಾಗು ‘ಐ’ ಎಂಟರ್ಟೈನ್ಮೆಂಟ್’ನ ವೈಭವಿ, ವೈನಿಧಿ ಮತ್ತು ವೈಸಿರಿ ನಿರ್ಮಿಸಿರುವ ಯಾನ ಸಿನೆಮಾದಲ್ಲಿ ಹಿರಿಯ ನಟ ಜೈಜಗದೀಶ್ ಹಾಗು ವಿಜಯಲಕ್ಷ್ಮಿ ಸಿಂಗ್ ಅವರು ತಮ್ಮ ಮೂವರು ಪುತ್ರಿಯರಾದ ವೈಭವಿ, ವೈನಿಧಿ ಮತ್ತು ವೈಸಿರಿಯನ್ನು ನಾಯಕಿಯರಾಗಿ ಕನ್ನಡ ಚಿತ್ರ ರಂಗಕ್ಕೆ ಪರಿಚಯಿಸುತ್ತಿರುವುದು ಇನ್ನೊಂದು ಹಿರಿಮೆಯಾಗಿದೆ.
ಬಹುಕಾಲದ ನಂತರ ಕನ್ನಡ ಹಿರಿಯ ನಟ ಅನಂತ್ ನಾಗ್ -ಸುಹಾಸಿನಿ ಜೋಡಿ ಒಟ್ಟಿಗೆ ನಟಿಸಿದ್ದು, ಅವರೊಂದಿಗೆ ಸುಮುಖ, ಚಕ್ರವರ್ತಿ ಹಾಗೂ ಅಭಿಷೇಕ್ ನಾಯಕರಾಗಿದ್ದು, ಸಾಧುಕೋಕಿಲ, ರಂಗಾಯಣ ರಘು, ಚಿಕ್ಕಣ್ಣ, ರಾಮಕೃಷ್ಣ, ಸುಂದರರಾಜ್, ಸುಂದರ್, ವೀಣಾಸುಂದರ್, ಎಂ.ಎನ್.ಲಕ್ಷ್ಮೀದೇವಿ ಮುಂತಾದವರು ನಟಿಸಿದ್ದಾರೆ.
Comments are closed.