ಕರ್ನಾಟಕ

ಕರ್ನಾಟಕದ ಸಚಿವರು ಮತ್ತು ಶಾಸಕರ ಮೇಲಿನ ಮುಂಬೈ ಪೊಲೀಸರ ಹಲ್ಲೆ ಅಸಹನೀಯ: ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ

Pinterest LinkedIn Tumblr

ಬೆಂಗಳೂರು: ಕರ್ನಾಟಕದ ಸಚಿವರು ಮತ್ತು ಶಾಸಕರ ಮೇಲಿನ ಮುಂಬೈ ಪೊಲೀಸರ ಹಲ್ಲೆ ಅಸಹನೀಯ ಎಂದು ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಮುಂಬೈನ ಖಾಸಗಿ ಹೊಟೆಲ್ ನಲ್ಲಿರುವ ಕರ್ನಾಟಕದ ಕಾಂಗ್ರೆಸ್ ಶಾಸಕರ ಮನವೊಲಿಸಿ ವಾಪಸ್ ಕರೆತರಲು ತೆರಳಿದ್ದ ಸಚಿವರಾದ ಡಿಕೆ ಶಿವಕುಮಾರ್, ಜಿಟಿ ದೇವೇಗೌಡ ಅವರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪೊಲೀಸರು ರಾಜ್ಯ ನಾಯಕರ ಮೇಲೆ ಹಲ್ಲೆ ಮಾಡಿದ್ದು ಎಂದು ಹೇಳಲಾಗುತ್ತಿದ್ದು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಫುಲ್ ಗರಂ ಆಗಿದ್ದಾರೆ.

ಈ ಕುರಿತಂತೆ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಎಚ್ ಡಿಕೆ, ಕರ್ನಾಟಕದ ಸಚಿವರು ಮತ್ತು ಶಾಸಕರ ಮೇಲಿನ ಮುಂಬೈ ಪೊಲೀಸರ ಹಲ್ಲೆ ಅಸಹನೀಯ. ಪೊಲೀಸರು ರಾಜಕೀಯ ಒತ್ತಡಕ್ಕೆ ಒಳಗಾಗಿ ತಮ್ಮ ನೈತಿಕತೆಯನ್ನು ಮರೆಯಬಾರದು. ಮಹಾರಾಷ್ಟ್ರ ಸರ್ಕಾರ ಬಿಜೆಪಿಯ ಕುದುರೆ ವ್ಯಾಪಾರಕ್ಕೆ ಈ ಮೂಲಕ ನೆರವು ನೀಡುತ್ತಿದ್ದು, ಇದು ದೇಶದ ಇತಿಹಾಸಕ್ಕೆ ದೊಡ್ಡ ಕಪ್ಪು ಚುಕ್ಕಿ ಎಂದು ಕಿಡಿಕಾರಿದ್ದಾರೆ.

Comments are closed.