ಕರ್ನಾಟಕ

ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ ಬಿಎಸ್‍ಪಿ ಶಾಸಕ ಮಹೇಶ್

Pinterest LinkedIn Tumblr


ಬೆಂಗಳೂರು: ರಾಜ್ಯದ ಏಕೈಕ ಬಿಎಸ್‍ಪಿ ಶಾಸಕ ಎನ್ ಮಹೇಶ್ ಅವರು ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂದಕ್ಕೆ ಪಡೆಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

14 ಶಾಸಕರು ರಾಜೀನಾಮೆ ನೀಡಿದರೂ ಸಹ, ನಾನು ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂದಕ್ಕೆ ಪಡೆಯುವುದಿಲ್ಲ ಎಂದು ಮಹೇಶ್ ಹೇಳಿದ್ದರು. ಆದರೆ ಬುಧವಾರ ರಾತ್ರಿ ನಡೆದ ಬೆಳವಣಿಗೆಯಲ್ಲಿ ಅಧಿವೇಶನದಲ್ಲಿ ನನಗೆ ಪ್ರತ್ಯೇಕ ಆಸನ ನಿಗದಿಪಡಿಸಿ ಎಂದು ಸ್ಪೀಕರ್ ಗೆ ಪತ್ರ ಬರೆದಿದ್ದಾರೆ.

ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬಿಎಸ್‍ಪಿ ಶಾಸಕ ಎನ್.ಮಹೇಶ್ ಅವರೊಂದಿಗೆ ವೈಯಕ್ತಿಕವಾಗಿ ಮಾತನಾಡಿ ಬಿಜೆಪಿಗೆ ಬೆಂಬಲ ನೀಡಲು ಕೇಳುವುದಾಗಿ ತಿಳಿಸಿದ್ದರು. ಶಾಸಕ ಎನ್ ಮಹೇಶ್ ಅವರು ಸಹ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ನಿರ್ಲಕ್ಷ್ಯಕ್ಕೆ ಒಳಗಾಗಿದ್ದಾರೆ. ಆದ್ದರಿಂದ ಅವರನ್ನು ಕರೆದು ವೈಯಕ್ತಿಕವಾಗಿ ಮಾತನಾಡುವ ಪ್ರಯತ್ನ ಮಾಡುತ್ತೇನೆ ಎಂದು ಹೆಳಿದ್ದರು.

ಈ ಹಿಂದೆ ಬಿಜೆಪಿಗೆ ಬೆಂಬಲ ನೀಡುವ ಕುರಿತು ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ್ದ ಶಾಸಕ ಎನ್. ಮಹೇಶ್ ಅವರು, ಯಾವುದೇ ಕಾರಣಕ್ಕೂ ನಾನು ಬಿಜೆಪಿಗೆ ಬೆಂಬಲ ನೀಡಲ್ಲ. ಹಾಗಾಗಿ ಬಿಜೆಪಿ ಸೇರುವ ಪ್ರಶ್ನೆಯೇ ಉದ್ಭವಿಸಲ್ಲ. ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರ ನಿರ್ದೇಶನದ ಮೇರೆಗೆ ನನ್ನ ನಿರ್ಧಾರವನ್ನು ತಿಳಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದರು. ಭಾನುವಾರ ರಾತ್ರಿ ಕಾಂಗ್ರೆಸ್-ಜೆಡಿಎಸ್ ನಾಯಕರ ಸಭೆಯಲ್ಲಿ ಎನ್.ಮಹೇಶ್ ಭಾಗಿಯಾಗಿದ್ದರು. ಆದರೆ ಸಭೆಯಿಂದ ಅರ್ಧದಿಂದಲೇ ಎನ್.ಮಹೇಶ್ ಹೊರ ಬಂದಿದ್ದರು. ಈ ಸಂದರ್ಭದಲ್ಲಿಯೇ ಅವರು ಬಿಜೆಪಿಗೆ ಬೆಂಬಲ ನೀಡಲಿದ್ದಾರೆ ಎಂಬ ಮಾತು ಕೇಳಿ ಬಂದಿತ್ತು.

Comments are closed.