
ನವದೆಹಲಿ: ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಅವರು (81) ದೆಹಲಿ ಆಸ್ಪತ್ರೆಯಲ್ಲಿ ಹೃದಯಾಘತದಿಂದಾಗಿ ಶನಿವಾರ ವಿಧಿವಶರಾಗಿದ್ದಾರೆ.
ದೆಹಲಿಯಲ್ಲಿ ಶೀಲಾ ದೀಕ್ಷಿತ್ ಅವರು 1998 ರಿಂದ 2013, 15 ವರ್ಷ ಕಾಲ ಮೂರು ಬಾರಿ ಮುಖ್ಯಮಂತ್ರಿ ಆಗಿ ಸೇವೆ ಸಲ್ಲಿದ್ದು, ಕೇರಳದ ರಾಜ್ಯಪಾಲರಾಗಿಯೂ ಕಾರ್ಯ ನಿರ್ವಹಿಸಿದ್ದರು. ಸದ್ಯ ಅವರಿಗೆ 81 ವರ್ಷ ವಯಸ್ಸು ಆಗಿತ್ತು. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ದೀಕ್ಷಿತ್ ಅವರು ದೆಹಲಿಯ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.
ದೇಶದ ರಾಷ್ಟ್ರಪತಿಗಳಾದ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಸೇರಿದಂತೆ ಹಲವು ರಾಜಕೀಯ ಗಣ್ಯರು ಶೀಲಾ ದೀಕ್ಷಿತ್ ಅವರ ನಿಧನಕ್ಕೆ ಟ್ವಿಟರ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಶೀಲಾ ದೀಕ್ಷಿತ್ ಜೀ ಅವರೇ ನಿಮ್ಮ ನಿಧನದಿಂದ ತೀವ್ರ ದುಃಖವಾಗುತ್ತಿದೆ. ನೀವು ಸ್ನೇಹಪರ ವ್ಯಕ್ತಿತ್ವವುಳ್ಳವರು, ನೀವು ದೆಹಲಿಯ ಅಭಿವೃದ್ಧಿಗೆ ಗಮನಾರ್ಹ ಕೊಡುಗೆ ನೀಡಿದವರು. ನಿಮ್ಮ ಕುಟುಂಬ ಮತ್ತು ಬೆಂಬಲಿಗರಿಗೆ ದು:ಖ ಭರಿಸುವ ಶಕ್ತಿ ಆ ದೇವರು ನೀಡಲಿ, ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದೀಕ್ಷಿತ್ ಜೊತೆ ಇರುವ ಪೋಟೋ ಪೋಸ್ಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
Comments are closed.