
ಟೀಂ ಇಂಡಿಯಾದ ಮಾಜಿ ನಾಯಕ ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿ ವಿಶ್ವಕಪ್ ನಂತರ ಕ್ರಿಕೆಟ್ ಗೆ ನಿವೃತ್ತಿ ಹೇಳಲಿದ್ದಾರೆ. ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು. ಜೊತೆಗೆ ವಿಂಡೀಸ್ ಪ್ರವಾಸದಲ್ಲಿ ಟೀಂ ಇಂಡಿಯಾದಲ್ಲಿ ಪಾಲ್ಗೊಳ್ಳದೇ ಇರುವ ಧೋನಿ ನಿವೃತ್ತಿ ಹೇಳುತ್ತಾರಾ ಎಂಬ ಹಲವು ಪ್ರಶ್ನೆಗಳ ಜೊತೆಗೆ ಅಭಿಮಾನಿಗಳಿಗೆ ಧೋನಿ ಮುಂದಿನ ನಡೆ ಏನು ಎಂಬ ಕುತೂಹಲಗಳು ಸಹ ಇದೆ. ಇದೇ ವೇಳೆ ಕ್ಯಾಪ್ಟನ್ ಕೂಲ್ ಧೋನಿ ತನ್ನ ಆಸೆಯನ್ನು ಬಹಿರಂಗ ಪಡಿಸಿದ್ಧಾರೆ.
ಅದು ಏನಾಪ್ಪಾ ಅಂದರೆ ಮಹಿ ರೆಜಿಮೆಂಟ್ ಸೇನಾ ತಂಡವನ್ನು ಸೇರಿ ಕರ್ತವ್ಯ ನಿರ್ವಹಿಸು ಆಸೆಯನ್ನು ಹೊಂದಿದ್ದು, ಅದರಂತೆಯೇ ಧೋನಿ ಅವರು ಪ್ಯಾರಾಚೂಟ್ ರೆಜಿಮೆಂಟ್ ಬೆಟಾಲಿಯನ್ ಅನ್ನು ಸೇರಿಕೊಂಡು ತರಬೇತಿಯಲ್ಲಿ ಭಾಗವಹಿಸಲು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅನುಮತಿ ಕೇಳಿದ್ದರು, ಇದಕ್ಕೆ ಒಪ್ಪಿರುವ ಬಿಪಿನ್ ರಾವತ್ ಆರ್ಮಿ ಬೆಟಾಲಿಯನ್ ತರಬೇತಿ ಪಡೆಯಲು ಧೋನಿಗೆ ಅವಕಾಶ ನೀಡಿದ್ದಾರೆ.
ವಿಶ್ವಕಪ್ ಪ್ರಾರಂಭವಾಗುವ ಮೊದಲೇ ಧೋನಿ ಸೇನಾ ತರಬೇತಿಗೆ ಹೋಗಬೇಕೆಂದು ತೀರ್ಮಾನಿಸಿದ್ದರು. ಆದರೆ ಕೆಲ ಸರಣಿ, ಐಪಿಎಲ್ ಪಂದ್ಯಗಳಿಂದಾಗಿ ಧೋನಿ ತರಬೇತಿ ಪಡೆಯಲು ಸಾಧ್ಯವಾಗಿರಲಿಲ್ಲ. ಆದರೀಗ 2 ತಿಂಗಳು ವಿರಾಮ ಘೋಷಿಸಿ ಧೋನಿ ಸೇನಾ ತರಬೇತಿ ಪಡೆಯಲು ತೆರಳುತ್ತಿದ್ದಾರೆ.
ಇನ್ನೂ ಜಮ್ಮು ಮತ್ತು ಕಾಶ್ಮೀರದಲ್ಲಿ ಧೋನಿ ಅವರು ಮುಂದಿನ ಎರಡು ತಿಂಗಳವರೆಗೂ ಪ್ಯಾರಾಚೂಟ್ ರೆಜಿಮೆಂಟ್ ಬೆಟಾಲಿಯನ್ ತರಬೇತಿ ಪಡೆಯಲಿದ್ದಾರೆ. ಆದರೆ ಧೋನಿ ಅವರು ಯಾವುದೇ ಸೇನಾ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳಲು ಅವಕಾಶವಿರುವುದಿಲ್ಲ.
ಭಾರತೀಯ ಸೇನೆ ಹೊಂದಿರುವ ಎರಡು ಪ್ಯಾರಾಚೂಟ್ ರೆಜಿಮೆಂಟ್‍ಗಳು ಪೈಕಿ ಇನ್‍ಫ್ಯಾಂಟ್ರಿ ಬೆಟಾಲಿಯನ್ ಕೂಡ ಒಂದಾಗಿದ್ದು, ಟೆರಿಟೋರಿಯಲ್ ಆರ್ಮಿಯ 106ನೇ ಇನ್‍ಫ್ಯಾಂಟ್ರಿ ಬೆಟಾಲಿಯನ್‍ಗೆ ಸೇರಿದ್ದ ಲೆಫ್ಟಿನೆಂಟ್ ಕರ್ನಲ್ ಗೌರವ ಹುದ್ದೆಯನ್ನು 2011ರಲ್ಲಿ ಧೋನಿ ಅವರಿಗೆ ನೀಡಲಾಗಿತ್ತು. ಅಲ್ಲದೆ ಇದಕ್ಕೂ ಮುನ್ನ 2015ರಲ್ಲಿ ಕೂಡ ಧೋನಿ ಆಗ್ರಾದಲ್ಲಿ ಪ್ಯಾರಾಚೂಟ್ ರೆಜಿಮೆಂಟ್ ಸೇನಾ ತಂಡದವರೊಂದಿಗೆ ತರಬೇತಿ ಪಡೆದುಕೊಂಡಿದ್ದರು.
ಅಲ್ಲದೆ ವಿಶ್ವಕಪ್ ಕ್ರಿಕೆಟ್ ಟೂರ್ನಿ ವೇಳೆ ಧೋನಿ ಕೀಪಿಂಗ್ ಮಾಡುವಾಗ ಪ್ಯಾರಾಚೂಟ್ ರೆಜಿಮೆಂಟ್ ಬಲಿದಾನ್ ಬ್ಯಾಡ್ಜ್ ಧರಿಸಿ ಗೌರವ ಸೂಚಿಸುವ ಮೂಲಕ ದೇಶ ಭಕ್ತಿಯನ್ನು ತೋರಿದ್ದರು. ಇನ್ನೂ ಈ ವಿಚಾರವಾಗಿ ಎಲ್ಲೆಡೆ ಹಲವು ಚರ್ಚೆಗಳು ಪ್ರಾರಂಭವಾಯಿತು. ಇದಕ್ಕೆ ಭಾರತದವರು ಈ ಬ್ಯಾಡ್ಜ್ ಧರಿಸಿದರೆ ತಪ್ಪೇನು ಎಂದು ಪ್ರಶ್ನಿಸಿದ್ದರು. ಜೊತೆಗೆ ಮುಂದಿನ ಪಂದ್ಯಗಳಲ್ಲಿ ಬಲಿದಾನ್ ಬ್ಯಾಡ್ಜ್ ಇರುವ ಗ್ಲೌಸ್ ಧರಿಸುವಂತಿಲ್ಲ ಎಂದು ಐಸಿಸಿ ಬಿಸಿಸಿಐಗೆ ಸೂಚನೆ ನೀಡಿತ್ತು, ಆದರಿಂದ ನಂತರದ ಪಂದ್ಯಗಳಲ್ಲಿ ಧೋನಿ ಬಲಿದಾನ್ ಬ್ಯಾಡ್ಜ್ ಇರುವ ಗ್ಲೌಸ್ ಧರಿಸಿರಲಿಲ್ಲ.
ಇನ್ನೂ ಧೋನಿ ಸೇನಾ ತರಬೇತಿಗೆ ಹೋಗುತ್ತಿರುವ ಹಿನ್ನೆಲೆ ಆಗಸ್ಟ್ 3 ರಿಂದ ಹೋಗುವ ಭಾರತದ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಧೋನಿ ಅವರನ್ನು ಆಯ್ಕೆ ಮಾಡಿಲ್ಲದ ಕಾರಣ ಎಂಎಸ್‍ಕೆ ಪ್ರಸಾದ್ ನೇತೃತ್ವದ ಹಿರಿಯ ಆಯ್ಕೆ ಸಮಿತಿ ಏಕದಿನ, ಟಿ20ಐ ಮತ್ತು ಟೆಸ್ಟ್ ತಂಡಗಳನ್ನು ಆಯ್ಕೆ ಮಾಡಲು ಭಾನುವಾರ ಮುಂಬೈನಲ್ಲಿ ಸಭೆ ಸೇರಿತ್ತು.
ಸಭೆಯಲ್ಲಿ ಎಂಎಸ್ ಧೋನಿ ಸೀಮಿತ ಓವರ್ ಗಳ ಸರಣಿಗೆ ಲಭ್ಯವಿರುವುದಿಲ್ಲ. ಅವರು ಕೂಡ ತಾವು ಇರುವುದಿಲ್ಲ ಎಂದು ತಿಳಿಸಿದ್ದಾರೆ. ವಿಶ್ವಕಪ್ ನಂತರ ನಾವು ಕೆಲವು ಯೋಜನೆಗಳನ್ನು ಹಾಕಿದ್ದೇವೆ. ಜೊತೆಗೆ ರಿಷಬ್ ಪಂತ್ ಅವರಿಗೆ ಹೆಚ್ಚಿನ ಅವಕಾಶಗಳನ್ನು ನೀಡಲು ಯೋಚಿಸಿದ್ದೇವೆ ಎಂದು ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್‍ಕೆ ಪ್ರಸಾದ್ ತಿಳಿಸಿದ್ದಾರೆ.
ಅಲ್ಲದೆ ಧೋನಿ ನಿವೃತ್ತಿ ಬಗೆಗೆ ಮಾತನಾಡಿದ ಎಂಎಸ್‍ಕೆ ಪ್ರಸಾದ್ ನಿವೃತ್ತಿ ಅವರ ವೈಯಕ್ತಿಕ ವಿಚಾರ ಧೋನಿಯಂತಹ ಮಹಾನ್ ಕ್ರಿಕೆಟಿಗರಿಗೆ ಯಾವಾಗ ನಿವೃತ್ತಿ ಹೊಂದಬೇಕೆಂದು ತಿಳಿದಿದೆ ಅದರ ಬಗೆಗೆ ಮಾತನಾಡುವ ಅವಶ್ಯಕತೆ ಇಲ್ಲವೆಂದು ಪರೋಕ್ಷವಾಗಿ ಹೇಳಿದ್ದಾರೆ.
Comments are closed.