
ಬೆಂಗಳೂರು: ಹೈಕಮಾಂಡ್ ಜೊತೆ ಬಿಜೆಪಿ ನಿಯೋಗ ಚರ್ಚೆ ಮಾಡುತ್ತಿದೆ. ಶೀಘ್ರದಲ್ಲೇ ಬಿಎಸ್ವೈ ನೇತೃತ್ವದಲ್ಲಿ ಸರ್ಕಾರ ರಚನೆಯಾಗಲಿದೆ ಎಂದು ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಶಾಸಕ ಶ್ರೀರಾಮುಲು ಅವರು ಗುರುವಾರ ಹೇಳಿದರು.
ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಅತೃಪ್ತರ ಅನರ್ಹತೆ ಇನ್ನೂ ನಿರ್ಧಾರ ಆಗಿಲ್ಲ, ಹೈಕಮಾಂಡ್ ಸೂಚನೆ ನಂತರ ಬಿಎಎಸ್ವೈ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡುತ್ತಾರೆ. ಬೇರೆ ಯಾರಿಗೂ ಯಾವ ಹುದ್ದೆ ಎನ್ನುವ ಪ್ರಸ್ತಾಪ ಆಗಿಲ್ಲ, ಯಡಿಯೂರಪ್ಪ ಸಿಎಂ ಆಗುವವರೆಗೂ ಅತೃಪ್ತರು ಬೆಂಗಳೂರಿಗೆ ಬರಲ್ಲ ಎಂದು ಅವರು ತಿಳಿಸಿದರು.
ಇನ್ನು ಶ್ರೀರಾಮುಲುಗೆ ಡಿಸಿಎಂ ಸ್ಥಾನ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಾನೊಬ್ಬ ಬಿಜೆಪಿಯ ಸಾಮಾನ್ಯ ಕಾರ್ಯಕರ್ತನಾಗಿದ್ದೇನೆ. ರಾಷ್ಟ್ರೀಯ ಅಧ್ಯಕ್ಷರು, ಯಡಿಯೂರಪ್ಪನವರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧವಾಗಿದ್ದೇನೆ ಎಂದು ಅವರು ನುಡಿದರು.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಮಾತ್ರ ಇದು ಚರ್ಚೆಯಾಗುತ್ತಿದೆ. ಅದಕ್ಕೆ ಕಿವಿಕೊಡೋದು ಬೇಡ. ಡಿಕೆಶಿ ಮತ್ತು ಸಿದ್ದರಾಮಯ್ಯ ಹತಾಶೆಯಿಂದ ಕೆಲವು ವಿಚಾರಗಳನ್ನು ಹರಿಬಿಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ಇಲ್ಲ. ಡಿಕೆಶಿ ಬಗ್ಗೆ ನನಗೆ ಗೌರವ ಇದೆ ಎಂದು ಶ್ರೀರಾಮುಲು ಅವರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ್ದಾರೆ.
Comments are closed.