ಮಂಗಳೂರು, ಜುಲೈ. 28 : ನಾಡಿನ ಹಿರಿಯ ಸಾಹಿತಿ ಲಕ್ಷ್ಮೀನಾರಾಯಣ ಆಳ್ವ ಅವರ ನಿಧನಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್, ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ರೆ|ಡಾ| ಪೀಟರ್ ಪಾವ್ಲ್ ಸಲ್ದಾನ್ಹಾ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರ ದೇಹಾಂತ್ಯದಿಂದ ನಮ್ಮಕ್ಷೇತ್ರದ ಮತ್ತು ನಮ್ಮಕುಟುಂಬದಆತ್ಮೀಯರೊಬ್ಬರನ್ನು ಕಳೆದುಕೊಂಡಿದ್ದೇವೆ. ನಮ್ಮಕುಟುಂಬದ ಬಂಧುಗಳೊಬ್ಬರು ಸ್ವರ್ಗಸ್ಥರಾದಂತೆ ನನಗೆ ಭಾವನೆ ಇದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಖೇದ ವ್ಯಕ್ತಪಡಿಸಿದ್ದಾರೆ.
ಇಂತಹ ಸಹೃದಯ, ಸಜ್ಜನ ಆಳ್ವರನ್ನು ಒಮ್ಮಿಂದೊಮ್ಮೆಲೆ ಕಳೆದುಕೊಂಡಾಗ ದುಃಖವೂ ಆಯಿತು. ಆ ಮೇಲೆ ತಕ್ಷಣ ಚೇತರಿಸಿಕೊಂಡೆ. ಏಕೆಂದರೆ ಸರ್ವಧರ್ಮೀಯರನ್ನೂ ಪ್ರೀತಿಸಿ, ಹಿಂದೂಧರ್ಮ ಮತ್ತು ಸಂಸ್ಕೃತಿಯ ಪ್ರತೀಕವಾಗಿದ್ದ ಅವರಎಂತಹ ಶ್ರೇಷ್ಠ ಬದುಕನ್ನು ನಡೆಸಿದ್ದಾರೆ ಅಂದರೆ ಅವರ ಮರಣಕ್ಕೆ ದುಃಖ ಪಡುವ ಬದಲುಅವರ ಆದರ್ಶಗಳನ್ನು ಸದಾ ನಮ್ಮೊಂದಿಗಿಟ್ಟುಕೊಂಡು ಜಾಗೃತರಾಗಿರುವುದೇಅವರಿಗೆಕೊಡುವ ಸೂಕ್ತ ಗೌರವಎಂದು ಆಶಿಸುತ್ತಾ, ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡುವಂತೆ ಶ್ರೀ ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಾಸಕ ಕಾಮಾತ್ ಸಂತಾಪ :
ಹಿರಿಯ ಸಾಹಿತಿ, ಜಾನಪದ ವಿದ್ವಾಂಸ, ಸಂಘಟಕ, ಸಾಮಾಜಿಕ ಕಾರ್ಯಕರ್ತರಾಗಿದ್ದ, ಸ್ವಾತಂತ್ರ್ಯ ಹೋರಾಟಗಾರ, ಗಾಂಧಿವಾದಿ ಡಾ|ಏರ್ಯ ಲಕ್ಷ್ಮಿನಾರಾಯಣ ಆಳ್ವ ಅವರ ನಿಧನಕ್ಕೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಮತ್ತು ಅವರ ಕುಟುಂಬಕ್ಕೆ ಈ ದು:ಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಶಾಸಕ ಕಾಮತ್ ಪ್ರಾರ್ಥಿಸಿದ್ದಾರೆ.
ಮಂಗಳೂರು ಬಿಷಪ್ ಸಂತಾಪ :
ಶಿಕ್ಷಣ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅಪಾರ ಸೇವೆ ನೀಡಿ ನಮ್ಮನ್ನಗಲಿದ ಲಕ್ಷ್ಮೀನಾರಾಯಣ ಆಳ್ವ ಇವರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ವಿವಿಧ ಕ್ಷೇತ್ರಗಳಲ್ಲಿ ಅವರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾದದ್ದು. ಅವರ ನಿಧನಕ್ಕೆ ಸಂತಾಪ ಸೂಚಿಸುತ್ತೇನೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತೀ ವಂದನೀಯ ಪೀಟರ್ ಪಾವ್ಲ್ ಸಲ್ದಾನ ಅವರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Comments are closed.