
ನವದೆಹಲಿ: ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮತ್ತು ಒಮರ್ ಅಬ್ದುಲ್ಲಾ ಅವರನ್ನು ಬಂಧಿಸಿ ತಾತ್ಕಾಲಿಕ ಜೈಲಿಗೆ ಸ್ಥಳಾಂತರಿಸಲಾಗಿದೆ.
ಭಾನುವಾರ ರಾತ್ರಿಯಿಂದ ಗೃಹಬಂಧನದಲ್ಲಿದ್ದ ಈ ಇಬ್ಬರೂ ನಾಯಕರನ್ನು ಇದೀಗ ಬಂಧಿಸಿ ಜೈಲಿಗೆ ಕಳಿಸಲಾಗಿದೆ.
ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕಳೆದ ವಾರ ಕಾಶ್ಮೀರದಲ್ಲಿ ಸೇನಾ ಜಮಾವಣೆ ಪ್ರರಂಬವಾದಾಗಿನಿಂದಲೂ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದರು.ಭಾರತೀಯ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಇಂದು “ಕರಾಳ” ದಿನ ಎಂಬುದಾಗಿ ಕರೆದ್ ಮುಫ್ತಿ ತಮ್ಮ ಸರಣಿ ಟ್ವೀಟ್ ಮೂಲಕ ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು.
Comments are closed.